ಮಂಜುನಾಥ, ಕೃಷ್ಣಪ್ಪರಿಗೆ ಅಂಬೇಡ್ಕರ್‌ ಪ್ರಶಸ್ತಿ

7

ಮಂಜುನಾಥ, ಕೃಷ್ಣಪ್ಪರಿಗೆ ಅಂಬೇಡ್ಕರ್‌ ಪ್ರಶಸ್ತಿ

Published:
Updated:
Deccan Herald

ಬೆಂಗಳೂರು: ವೈದ್ಯರಾದ ಆರ್‌.ಕೃಷ್ಣಪ್ಪ ಹಾಗೂ ಎಂ.ಪಿ.ಮಂಜುನಾಥ ಅವರಿಗೆ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಸಂಘದ ವತಿಯಿಂದ ನಗರದ ಪುರಭವನದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್‌ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ 18 ಮಂದಿಗೆ ‘ಸಾರಿಗೆ ರತ್ನ’ ಪ್ರಶಸ್ತಿಯನ್ನೂ ನೀಡಲಾಯಿತು.

ಬಿಎಂಟಿಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ. ಪೊನ್ನುರಾಜ್‌ ಮಾತನಾಡಿ, ‘ಅಂಬೇಡ್ಕರ್ ಶಿಷ್ಟಾಚಾರವನ್ನು ವಿರೋಧಿಸಿದವರು. ಒಂದು ದಿನ ಅವರ ಜನ್ಮದಿನಾಚರಣೆಯನ್ನು ಆಚರಿಸಿ ನಂತರ ಅವರ ತತ್ವ ಸಿದ್ದಾಂತಗಳನ್ನು ಮರೆಯುವುದು ಅಲ್ಲ. ಪ್ರತಿದಿನ ಅವರು ತೋರಿದ ದಾರಿಯಲ್ಲಿ ನಾವು ನಡೆಯುವುದು ಮುಖ್ಯ. ಬಿಎಂಟಿಸಿ ಸೇರಿದಂತೆ ಎಲ್ಲಾ ವಿಭಾಗದ ಸಿಬ್ಬಂದಿಗಳು ಸ್ವಚ್ಛತೆ ಕಾಯ್ದುಕೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.

 

 

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !