ಭಾನುವಾರ, ಸೆಪ್ಟೆಂಬರ್ 26, 2021
21 °C

ರಾಮೋಹಳ್ಳಿ: ಅಂಬೇಡ್ಕರ್‌ ಭವನ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಜರಾಜೇಶ್ವರಿನಗರ: ‘ಎಲ್ಲರಿಗೂ ಸಮಾನ ಹಕ್ಕು ನೀಡಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಹೆಸರಿನಲ್ಲಿ ನಿರ್ಮಿಸಿರುವ ಸಮುದಾಯ ಭವನವು ಒಳ್ಳೆಯ ಕೆಲಸಗಳಿಗೆ ಬಳಕೆಯಾಗಲಿ’ ಎಂದು ರಾಮೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್. ರೂಪಾ ವೇಣುಗೋಪಾಲ್‌ ಹೇಳಿದರು. 

ರಾಮೋಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಅಂಬೇಡ್ಕರ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಪಾರ್ವತಿ ಚಂದ್ರಪ್ಪ, ‘ಎಲ್ಲ ಸಮುದಾಯಗಳಿಗೆ ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಅವಕಾಶ ಕಲ್ಪಿಸಿಕೊಟ್ಟ ಅಂಬೇಡ್ಕರ್ ಅವರ ತೋರಿದ ಹಾದಿಯಲ್ಲಿ ಎಲ್ಲರೂ ನಡೆದು ನೆಮ್ಮದಿಯ ಸಮಾಜ ನಿರ್ಮಿಸೋಣ’ ಎಂದರು. 

ಜಿಲ್ಲಾ ಪಂಚಾಯಿತಿ ಸದಸ್ಯೆ ಲತಾ ಹನುಮಂತೇಗೌಡ ಮಾತನಾಡಿದರು. ರಾಮೋಹಳ್ಳಿ ರೈತ ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷ ವಿ.ವೇಣುಗೋಪಾಲ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಲತಾ ಪರಮಶಿವಯ್ಯ, ಸದಸ್ಯರಾದ ಲಕ್ಷ್ಮೀಪತಿ, ಚೇತನ್, ಮುಖಂಡ ಎಂ.ಚಂದ್ರಪ್ಪ ಮಾತನಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು