ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಕುರಿತು ರಾಜ್ಯಮಟ್ಟದ ಲೇಖನ ಸ್ಪರ್ಧೆ

Published 5 ಜೂನ್ 2024, 16:01 IST
Last Updated 5 ಜೂನ್ 2024, 16:01 IST
ಅಕ್ಷರ ಗಾತ್ರ

ಬೆಂಗಳೂರು: ಡಾ.ಬಿ.ಆರ್. ಅಂಬೇಡ್ಕರ್ ಅವರ 133ನೇ ಜಯಂತಿಯ ಅಂಗವಾಗಿ ‘ಎಲ್ಲರಿಗಾಗಿ ಅಂಬೇಡ್ಕರ್’ ಎಂಬ ಶೀರ್ಷಿಕೆಯ ಅಡಿಯಲ್ಲಿ ಶೇಷಾದ್ರಿಪುರಂ ಸಂಜೆ ಕಾಲೇಜಿನ ಅಂಬೇಡ್ಕರ್ ಅಧ್ಯಯನ ಕೇಂದ್ರವು ಪದವಿ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಲೇಖನ ಸ್ಪರ್ಧೆಯನ್ನು ಆಯೋಜಿಸಿದೆ. 

ಜೂನ್ 30ರ ಒಳಗೆ ಲೇಖನಗಳು godhoolikannadasangha@sedc.ac.in ಮೇಲ್‌ ಮಾಡಬೇಕು. ಪ್ರಾಂಶುಪಾಲರು, ಶೇಷಾದ್ರಿಪುರಂ ಸಂಜೆ ಕಾಲೇಜು, ನಂ-27, ನಾಗಪ್ಪ ಬೀದಿ, ಶೇಷಾದ್ರಿಪುರಂ, ಬೆಂಗಳೂರು-560020 ಇಲ್ಲಿಗೆ ತಲುಪುವಂತೆ ಅಂಚೆ ಮೂಲಕವೂ ಕಳುಹಿಸಬಹುದು.

ಲೇಖನದ ವಿಷಯಗಳು

ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕ ನ್ಯಾಯ, ಆರ್ಥಿಕ ವ್ಯವಸ್ಥೆ, ಕೃಷಿ, ವಾಣಿಜ್ಯ ವ್ಯವಹಾರ, ಯುವಜನತೆ, ಶಿಕ್ಷಣ, ಸಂವಿಧಾನ, ರಾಜಕೀಯ ವ್ಯವಸ್ಥೆ, ಮೀಸಲಾತಿ,  ಸ್ತ್ರೀ ಸಬಲೀಕರಣ, ಅಧ್ಯಾತ್ಮ. ಈ ವಿಷಯಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಲೇಖನ ಸಿದ್ಧಪಡಿಸಿ ಕಳುಹಿಸಬೇಕು ಎಂದು ಅಂಬೇಡ್ಕರ್‌ ಅಧ್ಯಯನ ಕೇಂದ್ರದ ಸಂಚಾಲಕ ಸತ್ಯಮಂಗಲ ಮಹಾದೇವ, ಪ್ರಾಂಶುಪಾಲ ಎನ್.ಎಸ್. ಸತೀಶ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT