ಬೆಂಗಳೂರು: ‘ಭಾರತದ ಪ್ರತಿಯೊಬ್ಬ ಪ್ರಜೆಯ ಸಮಾನ ಹಕ್ಕುಗಳಿಗೆ ಹೋರಾಟ ಮಾಡಿದ ಅಂಬೇಡ್ಕರ್ ಅವರು ಒಂದೇ ಸಮುದಾಯಕ್ಕೆ ಸೀಮಿತರಾದವರಲ್ಲ’ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಹೇಳಿದರು.

ಜ್ಞಾನಜ್ಯೋತಿ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಅಂಬೇಡ್ಕರ್ ಅಧ್ಯಯನ ಕೇಂದ್ರ ಸಹಯೋಗದಲ್ಲಿ ವಾರ್ತಾ, ಸಾರ್ವಜನಿಕ ಸಂಪರ್ಕ ಇಲಾಖೆ ನಗರ ಜಲ್ಲಾ ಘಟಕ ಏರ್ಪಡಿಸಿದ್ದ ಭೀಮ ಗಾಯನ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಸಂವಿಧಾನ ಪೀಠಿಕೆಯು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಐಕ್ಯತೆ ಮತ್ತು ಭ್ರಾತೃತ್ವದ ಬದ್ಧತೆಯನ್ನು ಪ್ರತಿಪಾದಿಸುತ್ತದೆ. ಅಂಬೇಡ್ಕರ್ ರಚಿತ ಈ ಸಂವಿಧಾನದ ಪೀಠಿಕೆಯೇ ಅವರು ಒಬ್ಬ ವಿಶ್ವ ಮಾನವ ಎಂಬುದನ್ನು ಸಾಬೀತು ಪಡಿಸುತ್ತದೆ’ ಎಂದರು.

ಗಾಯಕ ಪಿಚ್ಚಳ್ಳಿ ಶ್ರೀನಿವಾಸ್ ಮಾತನಾಡಿ, ‘ಸಾಮಾಜಿಕ ಹೋರಾಟಗಳಲ್ಲಿ ಹಾಡು ಪ್ರಬಲ ಸಾಧನವಾಗಿದ್ದವು. ಯುವ ಜನತೆಗೆ “ಭೀಮ ಗಾಯನ”ದ ಹಾಡುಗಳು ಅಂಬೇಡ್ಕರ್ ಅವರ ಬದುಕಿನ ಹೋರಾಟ, ಸಾಧನೆ ಬಗ್ಗೆ ಜಾಗೃತಿ ಮೂಡಿಸುತ್ತದೆ’ ಎಂದರು.

ಕುಲಪತಿ ಬಿ.ರಮೇಶ.ಬಿ, ಉಪ ನಿರ್ದೇಶಕಿ ಪಲ್ಲವಿ ಹೊನ್ನಾಪುರ, ಮುಖಂಡ ಮಾವಳ್ಳಿ ಶಂಕರ್, ಅಧ್ಯಯನ ಕೇಂದ್ರದ ನಿರ್ದೇಶಕಿ ಕೆ.ಆರ್.ಜಲಜಾ, ಸಿಂಡಿಕೇಟ್ ಸದಸ್ಯ ಫ್ರಾನ್ಸಿಸ್ ಉಪಸ್ಥಿತರಿದ್ದರು.

ಮೈಸೂರಿನ ʼಅಮ್ಮ ವಸುಂಧರೆ ಕಾಲತಂಡʼದ ಕಲಾವಿದರು ಕಾರ್ಯಕ್ರಮ ಪ್ರಸ್ತುತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.