ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಥಶಾಸ್ತ್ರದ ಜಾಗತಿಕ ಶ್ರೇಷ್ಠ ಸಂಸ್ಥೆ ಗುರಿ

ಸ್ಕೂಲ್ ಆಫ್ ಎಕನಾಮಿಕ್ಸ್‌ ಕಟ್ಟಡ ಉದ್ಘಾಟನೆಗೆ ಪ್ರಧಾನಿಗೆ ಆಹ್ವಾನ
Last Updated 19 ಡಿಸೆಂಬರ್ 2019, 20:25 IST
ಅಕ್ಷರ ಗಾತ್ರ

ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ನನೂತನ ಕಟ್ಟಡದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಹೇಳಿದರು.

ನಗರದಲ್ಲಿ ಗುರುವಾರನಡೆದ ಸಂಸ್ಥೆಯ ಆಡಳಿತ ಮಂಡಳಿಯ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಪರಮೋಚ್ಚ ಹಾಗೂ ಜಗತ್ತಿನ ಶ್ರೇಷ್ಠ ಅರ್ಥಶಾಸ್ತ್ರ ಅಧ್ಯಯನ ಕೇಂದ್ರವಾಗಿ ರೂಪಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.

‘ಸಂಸ್ಥೆಯಲ್ಲಿ ಅಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗುವುದು. ಎಲ್ಲವಿಶ್ವವಿದ್ಯಾಲಯಗಳ ಮೂಲಕ ಹೆಚ್ಚು ಪ್ರಚಾರ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ದಾಖಲಾಗಬೇಕು. 10 ಪ್ರತಿಭಾವಂತ ವಿದ್ಯಾರ್ಥಿಗಳಿಗೆಡಾ.ಬಿ.ಆರ್. ಅಂಬೇಡ್ಕರ್ ಫೆಲೋಶಿಪ್ ನೀಡಲಾಗುವುದು’ ಎಂದರು.

ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಈ ಸಂಸ್ಥೆಗೆ ಅತ್ಯುತ್ತಮ ತಜ್ಞ ಉಪನ್ಯಾಸಕರ ನೇಮಕ ಮಾಡಿಕೊಳ್ಳಬೇಕು. ನೇಮಕಾತಿಗೆ ಜಾಗತಿಕ ಮಟ್ಟದ ಜಾಹೀರಾತು ನೀಡಿ, ಅವಕಾಶವನ್ನು ನೀಡಿ ತಜ್ಞರನ್ನು ಆಯ್ಕೆ ಮಾಡಿಕೊಳ್ಳಬೇಕು. ಶಿಕ್ಷಣದಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದರು.

ಸಂಸ್ಥೆಯ ಸದಸ್ಯೆ ಸುಧಾಮೂರ್ತಿ, ಉಪನ್ಯಾಸಕರಿಗೆ ಉತ್ತಮ ವೇತನ ನೀಡಬೇಕು. ತ್ವರಿತವಾಗಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅವರು ಹೇಳಿದರು.

2018-19ನೇ ಸಾಲಿನಲ್ಲಿ ಐದುವರ್ಷದ ಸಂಯೋಜಿತ ಎಂ.ಎಸ್ಸಿ ಅರ್ಥಶಾಸ್ತ್ರ ತರಗತಿಗಳನ್ನು ಪ್ರಾರಂಭಿಸಿದ್ದು, 50 ಸ್ಥಾನಗಳ ಪೈಕಿ 49 ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ನನಿರ್ದೇಶಕಎಂ.ಲಕ್ಷ್ಮೀನಾರಾಯಣ ಹಾಗೂ ಸಿಇಒ ಎಂ.ಬಿ.ದ್ಯಾಬೇರಿ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT