ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

248 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ

Last Updated 25 ಫೆಬ್ರವರಿ 2023, 22:16 IST
ಅಕ್ಷರ ಗಾತ್ರ

ಕೆಂಗೇರಿ: ಅಂಬೇಡ್ಕರ್ ತಾಂತ್ರಿಕ ಕಾಲೇಜು ಪದವಿ ಪ್ರದಾನ ಕಾರ್ಯಕ್ರಮ ದಲ್ಲಿ 248 ಸ್ನಾತಕೋತ್ತರ ವಿದ್ಯಾರ್ಥಿ ಗಳು ಹಾಗೂ 98 ಸ್ನಾತಕ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಂಟಿನೆಂಟಲ್ ಇಂಡಿಯ ಸಂಸ್ಥೆ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಪ್ರಶಾಂತ್ ದೊರೆಸ್ವಾಮಿ ಮಾತನಾಡಿ, ‘ಮೌಲ್ಯಗಳೊಂದಿಗೆ ರಾಜಿ ಮಾಡಿಕೊಂಡು ಬದುಕು ಕಟ್ಟಿಕೊಳ್ಳುವ ಅಗತ್ಯತೆ ಇಲ್ಲ. ಸದುದ್ದೇಶದಿಂದ ಕೂಡಿದ ನಿರಂತರ ಪ್ರಯತ್ನ ನಮ್ಮನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ’ ಎಂದು ಹೇಳಿದರು.

‘ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ಸಾಧ್ಯತೆಗಳಿರುತ್ತದೆ. ನಮಗಿರುವ ಸೌಕರ್ಯ, ಅರ್ಹತೆ ಹಾಗೂ ಶಕ್ತಿಯನ್ನು ಬಳಸಿಕೊಂಡು ಮುನ್ನಡೆ ಸಾಧಿಸಬೇಕು’ ಎಂದರು.

ಸ್ನಾತಕೋತ್ತರ ವಿಭಾಗದಲ್ಲಿ ಗೀತಾ ಜಿ., ಮಾನವಿ, ಎನ್.ಜಿ, ಆಫ್ರೀನ್ ತಬಸ್ಸುಮ್, ನಿಕಿಲ್ಎನ್, ಧನ್ಯ ಕೆ.ಎನ್., ಕಾವ್ಯಶ್ರೀ ಕೆ.ಎಸ್,
ಕಾರ್ತಿಕ್ ವಿ.ಎಂ., ಮತ್ತು ಡಿ.ಕೆ.ಕರುಣಶ್ರೀ ರ್‍ಯಾಂಕ್ ಪಡೆದು ಸಂಭ್ರಮಿಸಿದರು.

ಪಿವಿಪಿ ಟ್ರಸ್ಟ್ ಕಾರ್ಯದರ್ಶಿ ಎ.ಆರ್.ಕೃಷ್ಣಮೂರ್ತಿ, ಖಜಾಂಚಿ ಉಮೇಶ್, ಟ್ರಸ್ಟಿ ಶಿವಮಲ್ಲು, ಪ್ರಾಂಶುಪಾಲೆ ಪ್ರೊ. ನಾಗರತ್ನ, ಮತ್ತು ಡೀನ್ ಪ್ರೊ.ಅನುರಾಧಾ ಮತ್ತಿತರರು ಉಪಸ್ಥಿತರಿದ್ದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT