ಸೋಮವಾರ, ಜುಲೈ 4, 2022
24 °C

ಅಂಬಿಗ ಸಮಾಜ ಶೀಘ್ರ ಎಸ್‌.ಟಿ.ಗೆ: ಡಾ.ಮೌಲಾಲಿ ವಿಶ್ವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಅಂಬಿಗ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್.ಟಿ) ಸೇರಿಸುವ ಕಾರ್ಯ ಶೀಘ್ರದಲ್ಲಿಯೇ ಆಗುವ ವಿಶ್ವಾಸವಿದೆ’ ಎಂದು ರಾಜ್ಯ ಗಂಗಾಮತಸ್ಥರ ಸಂಘದ ರಾಜ್ಯಘಟಕದ ಅಧ್ಯಕ್ಷ ಡಾ.ಬಿ.ಮೌಲಾಲಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಮಂಗಳವಾರ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ‘ಅಂಬಿಗ ಸಮಾಜವನ್ನು ಎಸ್.ಟಿಗೆ ಸೇರಿಸುವಂತೆ ಬಹುದಿನಗಳಿಂದ ಒತ್ತಾಯಿಸುತ್ತಲೇ ಬಂದಿದ್ದೇವೆ. ಆ ಸಮಯ ಈಗ ಹತ್ತಿರವಾಗಿದೆ. ಈ ಕುರಿತು ರಾಜಕೀಯ ಚರ್ಚೆ ನಡೆಯುತ್ತಿದೆ’ ಎಂದರು.‘ಮುಂದಿನ

ವರ್ಷದಿಂದ ಜ.21ರಂದು ಬೆಂಗಳೂರಿನಲ್ಲಿ ಮಾತ್ರ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಆಚರಿಸುವಂತಾಗಬೇಕು. ಆಗ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಂದ ಸಹಸ್ರಾರು ಜನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ. ಸರ್ಕಾರದ ಗಮನವನ್ನೂ ಸೆಳೆಯಬಹುದು. ಜ.21ರ ನಂತರ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕಾರ್ಯಕ್ರಮ ನಡೆಯಬೇಕು. ಈ ನಿಟ್ಟಿನಲ್ಲಿ ಸಮಾಜದ ಜಿಲ್ಲಾ ಘಟಕಗಳ ಅಧ್ಯಕ್ಷರು, ತಾಲ್ಲೂಕು ಮುಖಂಡರಲ್ಲಿ ಮಾತುಕತೆ ನಡೆಸಿ ತೀರ್ಮಾನಿಸಲಾಗುವುದು’ ಎಂದರು. 

ಹಾವೇರಿಯ ನಿಜಶರಣ ಅಂಬಿಗರ ಚೌಡಯ್ಯ ಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮಿ, ‘ಎಲ್ಲರೂ ಸಮಾನರು, ಎಲ್ಲರಿಗೂ ಸಮಬಾಳು ಎಂಬುದು ಚೌಡಯ್ಯನವರ ವಚನದ ಮುಖ್ಯ ಅಂಶಗಳಾಗಿವೆ’ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್.ರಂಗಪ್ಪ, ‘ಅಂಬಿಗರ ಚೌಡಯ್ಯ 12ನೇ ಶತಮಾನದಲ್ಲಿ ಸಮಾಜದಲ್ಲಿದ್ದ ಅಸಮಾನತೆ, ಡಾಂಭಿಕತನ, ಅನಾಚಾರವನ್ನು ತಮ್ಮ ವಚನಗಳ ಮೂಲಕ ನೇರ ಮತ್ತು ನಿಷ್ಠುರವಾಗಿ ಖಂಡಿಸಿದವರು’ ಎಂದರು. 

*
>ಅಂಬಿಗರ ಚೌಡಯ್ಯನವರ ವಚನಗಳು ಸಮಾಜದ ಎಲ್ಲ ಜನರಿಗೆ ತಲುಪಬೇಕು. ಅವುಗಳಿಗೆ ಹೆಚ್ಚು ಪ್ರಚಾರ ನೀಡುವ ಅಗತ್ಯ ಇದೆ
–ಶಾಂತಭೀಷ್ಮ ಚೌಡಯ್ಯ ಸ್ವಾಮಿ, ನಿಜಶರಣ ಅಂಬಿಗರ ಚೌಡಯ್ಯ ಪೀಠ, ಹಾವೇರಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು