ಮಂಗಳವಾರ, ಮೇ 24, 2022
30 °C

ಪೊಲೀಸರು ಸಾರ್ವಜನಿಕರ ಮೊಬೈಲ್ ಕಸಿದುಕೊಳ್ಳುವುದು ಸರಿಯಲ್ಲ- ಕಮಲ್ ಪಂತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸಾರ್ವಜನಿಕರ ಮೊಬೈಲ್‌ಗಳನ್ನು ಪೊಲೀಸರು ಅನಗತ್ಯವಾಗಿ ಕಸಿದುಕೊಳ್ಳುವುದು ಸರಿಯಲ್ಲ. ಯಾರಾದರೂ ಪೊಲೀಸರು ಮೊಬೈಲ್‌ ಕಸಿದುಕೊಂಡಿರುವ ಬಗ್ಗೆ ದೂರು ನೀಡಿದರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆ.

‘ತಪಾಸಣೆ ನೆಪದಲ್ಲಿ ಪೊಲೀಸರು ಅನಗತ್ಯವಾಗಿ ಮೊಬೈಲ್ ಕಸಿದುಕೊಳ್ಳುತ್ತಿದ್ದಾರೆ. ವಿನಾಕಾರಣ ಪ್ರಶ್ನೆಗಳನ್ನು ಕೇಳಿ ಜನರಿಗೆ ತೊಂದರೆ ನೀಡುತ್ತಿದ್ದಾರೆ’ ಎಂಬುದಾಗಿ ನಿಖಿಲ್ ಎಂಬುವರು ಟ್ವೀಟ್
ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಮಲ್ ಪಂತ್, ‘ನಿರ್ದಿಷ್ಟ ಘಟನೆ ಬಗ್ಗೆ ಮಾಹಿತಿ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇನೆ’ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು