ಬೆಂಗಳೂರು: ದೇಶದ್ರೋಹ ಆರೋಪದಡಿ ಬಂಧಿಸಲಾಗಿರುವ ಅಮೂಲ್ಯಾ ಲಿಯೋನ್ (19) ಅವರನ್ನು ಬಸವೇಶ್ವರನಗರ ಠಾಣೆಯಿಂದ ಅಜ್ಞಾತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಅವರನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಇತ್ತೀಚೆಗಷ್ಟೇ ಕಸ್ಟಡಿಗೆ ಪಡೆದಿರುವ ಪೊಲೀಸರು, ಬಸವೇಶ್ವರನಗರ ಠಾಣೆಯಲ್ಲಿರುವ ವಿಶೇಷ ಕೊಠಡಿಯಲ್ಲಿ ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದಾರೆ. ಗುರುವಾರ ರಾತ್ರಿಯೇ ಅವರನ್ನು ಪೊಲೀಸ್ ವಾಹನದಲ್ಲಿ ಠಾಣೆಯಿಂದ ಬೇರೆಡೆಗೆ ಕರೆದೊಯ್ಯಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿಯೊಬ್ಬರು, ‘ಇದೊಂದು ಸೂಕ್ಷ್ಮ ಪ್ರಕರಣ. ಆರೋಪಿಯಿಂದ ಸಾಕಷ್ಟು ಮಾಹಿತಿ ಪಡೆಯಲಾಗಿದ್ದು, ಅದರ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿಯನ್ನು ಕೆಲ ಸ್ಥಳಗಳಿಗೂ ಕರೆದೊಯ್ದು ಮಾಹಿತಿ ಪಡೆಯುತ್ತಿದ್ದೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.