ಶುಕ್ರವಾರ, ಜುಲೈ 30, 2021
28 °C

ಅಮೂಲ್ಯ ಲಿಯೋನ್ ಪ್ರಕರಣ: ‘ಎನ್‌ಐಎ ತನಿಖೆ ಏಕೆ?’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯ ಲಿಯೋನ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸುವಂತಹ ವಿಶೇಷ ಏನಿದೆ’ ಎಂದು ಹೈಕೋರ್ಟ್, ಅರ್ಜಿದಾರರನ್ನು ಪ್ರಶ್ನಿಸಿದೆ.

‘ಪ್ರಕರಣದ ತನಿಖೆಯನ್ನು ಎನ್ಐಗೆ ವಹಿಸಬೇಕು’ ಎಂದು ಕೋರಿ ರಾಜ್ಯ ವಕೀಲರ ಪರಿಷತ್ ಸದಸ್ಯ ವಿಶಾಲ ರಘು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಾದ‌ ಮಂಡಿಸಿದ ವಕೀಲ ಎಚ್. ಪವನ್ ಚಂದ್ರ ಶೆಟ್ಟಿ, ‘ದೇಶದ ವಿರುದ್ಧ ಘೋಷಣೆ ಕೂಗಿದ ಪ್ರಕರಣವಾಗಿದ್ದು ಅತ್ಯಂತ ಗಂಭೀರ ಸ್ವರೂಪದ್ದಾಗಿದೆ. ಪ್ರಕರಣದ ತನಿಖೆಯನ್ನು ಉಪ್ಪಾರಪೇಟೆ ಠಾಣೆ ತನಿಖಾಧಿಕಾರಿ ಸೂಕ್ತವಾಗಿ ನಡೆಸಿಲ್ಲ. ನಿಗದಿತ 90 ದಿನಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಇದರಿಂದ ಆರೋಪಿಗೆ ಜಾಮೀನು ಸಿಕ್ಕಿದೆ’ ಎಂದು ಆಕ್ಷೇಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಇದೊಂದೇ ಕಾರಣಕ್ಕೆ ಆರೋಪಿಗೆ ದೊರೆತಿರುವ ಜಾಮೀನು ರದ್ದು ಪಡಿಸಬಹುದೇ’ ಎಂದು ಪ್ರಶ್ನಿಸಿತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು