ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬನ್ ಉದ್ಯಾನದಲ್ಲಿ ಸ್ಕೇಟಿಂಗ್ ಮಾಡುತ್ತಿದ್ದವರ ಮೇಲೆ ಹಲ್ಲೆಗೆ ಯತ್ನ

Published 14 ಅಕ್ಟೋಬರ್ 2023, 14:33 IST
Last Updated 14 ಅಕ್ಟೋಬರ್ 2023, 14:33 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಕಬ್ಬನ್‌ ಉದ್ಯಾನದಲ್ಲಿ ಸ್ಕೇಟಿಂಗ್ ಮಾಡುತ್ತಿದ್ದವರ ಮೇಲೆ ಹಲ್ಲೆ ಮಾಡಲು ವ್ಯಕ್ತಿಯೊಬ್ಬರು ಯತ್ನಿಸಿದ್ದು, ಸಂತ್ರಸ್ತರು ಸಾಮಾಜಿಕ ಮಾಧ್ಯಮ ‘ಎಕ್ಸ್‌’ ಪೋಸ್ಟ್‌ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬೆಂಗಳೂರು ಪೊಲೀಸ್ ಕಮಿಷನರೇಟ್‌ ಸಾಮಾಜಿಕ ಮಾಧ್ಯಮ ವಿಭಾಗದ ಸಿಬ್ಬಂದಿ, ‘ಕಬ್ಬನ್ ಪಾರ್ಕ್‌ ಠಾಣೆ ಪೊಲೀಸರಿಗೆ ಮಾಹಿತಿ ರವಾನಿಸಲಾಗಿದೆ. ನಿಮ್ಮನ್ನು ಸಂಪರ್ಕಿಸಲಿದ್ದಾರೆ. ಠಾಣೆಗೆ ದೂರು ನೀಡಿ’ ಎಂದಿದ್ದಾರೆ. ಆದರೆ, ಸದ್ಯಕ್ಕೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ.

ಆಗಿದ್ದೇನು?

ಕೆಲ ದಿನಗಳ ಹಿಂದೆಯಷ್ಟೇ ಹಲವರು ಸ್ಕೇಟಿಂಗ್ ಮಾಡುತ್ತ ಉದ್ಯಾನದಲ್ಲಿ ಸುತ್ತಾಡುತ್ತಿದ್ದರು. ಭದ್ರತಾ ಸಿಬ್ಬಂದಿ ಹೆಸರಿನಲ್ಲಿ ಎಲ್ಲರನ್ನೂ ತಡೆದಿದ್ದ ವ್ಯಕ್ತಿಯೊಬ್ಬರು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ನಂತರ, ಮೊಬೈಲ್ ಕಸಿದುಕೊಂಡು ಹಲ್ಲೆಗೆ ಯತ್ನಿಸಿದ್ದರೆಂದು ಹೇಳಲಾಗಿದೆ. ಇದೇ ಸಂಗತಿ ‘ಎಕ್ಸ್‌’ ಪೋಸ್ಟ್‌ನಲ್ಲಿದೆ.

ಆರೋಪಿ ಹಲ್ಲೆಗೆ ಯತ್ನಿಸಿದ್ದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿರುವ ಸಂತ್ರಸ್ತರು, ಅದನ್ನು ಸಾಮಾಜಿಕ ಮಾಧ್ಯಮಗಳಲ್ಲೂ ಅಪ್‌ಲೋಡ್ ಮಾಡಿದ್ದಾರೆ.

‘ಉದ್ಯಾನದಲ್ಲಿ ಸ್ಕೇಟಿಂಗ್‌ ಮಾಡುವುದು ಸುರಕ್ಷಿತವೇ? ಭದ್ರತಾ ಸಿಬ್ಬಂದಿ ಹೆಸರಿನಲ್ಲಿ ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದು ಹಲವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT