ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಐದನೇ ಮಹಡಿಯಿಂದ ಬಿದ್ದು ವೃದ್ಧ ಸಾವು

Published 23 ಡಿಸೆಂಬರ್ 2023, 23:30 IST
Last Updated 23 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ಇಟ್ಟಮಡು ಬಡಾವಣೆಯಲ್ಲಿರುವ ಅಪಾರ್ಟ್‌ಮೆಂಟ್‌ ಸಮುಚ್ಚಯವೊಂದರ 5ನೇ ಮಹಡಿಯಿಂದ ಬಿದ್ದು ತಿಮ್ಮಯ್ಯ (75) ಅವರು ಮೃತಪಟ್ಟಿದ್ದು, ಈ ಸಂಬಂಧ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಸ್ಥಳೀಯ ನಿವಾಸಿ ತಿಮ್ಮಯ್ಯ, ಮಗ, ಸೊಸೆ ಹಾಗೂ ಮೊಮ್ಮಕ್ಕಳ ಜತೆ ವಾಸವಿದ್ದರು. ಇವರ ಸಾವಿನ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ತಿಮ್ಮಯ್ಯ ಅವರ ಮಗ, ಇತ್ತೀಚೆಗೆ ಶಬರಿಮಲೈಗೆ ಹೋಗಿದ್ದಾರೆ. ಸೊಸೆ ಹಾಗೂ ಮೊಮ್ಮಗಳು ಮಾತ್ರ ಮನೆಯಲ್ಲಿದ್ದರು. ಶನಿವಾರ ನಸುಕಿನಲ್ಲಿ ಎಚ್ಚರಗೊಂಡಿದ್ದ ತಿಮ್ಮಯ್ಯ, ಮನೆಯಿಂದ ಹೊರಗೆ ಬಂದಿದ್ದರು. ಮೆಟ್ಟಿಲು ಇಳಿಯುವಾಗ ಆಯತಪ್ಪಿ ಐದನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದರು. ಅದನ್ನು ನೋಡಿದ್ದ ಭದ್ರತಾ ಸಿಬ್ಬಂದಿ, ಸೊಸೆಗೆ ಮಾಹಿತಿ ನೀಡಿದ್ದರು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT