ಬೆಂಗಳೂರು: ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬ ಶನಿವಾರ ರಾತ್ರಿ ವಿಕ್ಟೋರಿಯಾ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಚಂದ್ರಶೇಖರ್ (32) ಪರಾರಿಯಾದ ಆರೋಪಿ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಜೈಲರ್ ಡಿ.ಗೋಪಿನಾಥ್ ಅವರ ದೂರು ಆಧರಿಸಿ ವಿ.ವಿ.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘2023ರಲ್ಲಿ ಸುಬ್ರಹ್ಮಣ್ಯನಗರ ಠಾಣೆಯಲ್ಲಿ ದಾಖಲಾಗಿದ್ದ ಡಕಾಯಿತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಚಂದ್ರಶೇಖರ್, ಎರಡು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ. ಮೇ 2ರಂದು ಎದೆ ನೋವು ಹಾಗೂ ವಾಂತಿ ಹೆಚ್ಚಾಗಿದ್ದರಿಂದ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸೂಚನೆ ಮೇರೆಗೆ ತುರ್ತುನಿಗಾ ಘಟಕದ 3ನೇ ಮಹಡಿಯಲ್ಲಿ ಒಳ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ. ಆತನ ಬೆಂಗಾವಲಾಗಿ ಜೈಲು ವೀಕ್ಷಕ ಸಂತೋಷ್ ರಾಥೋಡ್ ಅವರನ್ನು ನೇಮಿಸಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಮೇ 3ರ ರಾತ್ರಿ 11 ಗಂಟೆ ಸುಮಾರಿಗೆ ಆರೋಪಿ ತುರ್ತು ನಿಗಾ ಘಟಕದಿಂದ ಪರಾರಿಯಾಗಿದ್ದಾನೆ. ಈ ವಿಚಾರ ತಿಳಿದ ಸಂತೋಷ್ ರಾಥೋಡ್, ಆಸ್ಪತ್ರೆ ಹಾಗೂ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಆರೋಪಿ ಪತ್ತೆಯಾಗದ ಕಾರಣ ಜೈಲಿನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಜೈಲರ್ ಡಿ.ಗೋಪಿನಾಥ್ ಹಾಗೂ ಇತರೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಠಾಣೆಗೆ ಬಂದು ದೂರು ನೀಡಿ, ಆರೋಪಿಯನ್ನು ಮರು ಬಂಧಿಸುವಂತೆ ಕೋರಿದ್ದಾರೆ. ಆರೋಪಿ ಪತ್ತೆ ಕಾರ್ಯ ನಡೆಯುತ್ತಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.