ಬೆಂಗಳೂರು: ಭಾರತೀಯ ವಿದ್ಯಾಭವನ ಮತ್ತು ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಜಂಟಿಯಾಗಿ ನೀಡುವ 2025ನೇ ಸಾಲಿನ ‘ವಿ.ಕೃ. ಗೋಕಾಕ್ ಪ್ರಶಸ್ತಿ’ಗೆ ಸಾಹಿತಿ ಆನಂದ ಪಾಟೀಲ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 25 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಟ್ರಸ್ಟ್ ಅಧ್ಯಕ್ಷ ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ನೇತೃತ್ವದಲ್ಲಿ, ಅನಿಲ್ ಗೋಕಾಕ್, ಸುನಿಲ್ ಗೋಕಾಕ್, ಪ್ರೊ. ನಾಗರಾಜ ಹೆಗಡೆ ಅಪಗಾಲ, ನಿಶಾ ಗೋಕಾಕ್, ಅಭಿನವ ರವಿಕುಮಾರ್ ಮತ್ತು ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್.ಎನ್. ಸುರೇಶ್ ಅವರನ್ನು ಒಳಗೊಂಡ ಸಮಿತಿ ಈ ಆಯ್ಕೆ ಮಾಡಿದೆ.

ಸೆ.7ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದ ಕೆಆರ್ಜಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ರಾಯಚೂರಿನ ಮಹರ್ಷಿ ಆದಿಕವಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಅವರು ಪ್ರಶಸ್ತಿ ಪ್ರದಾನ ಮಾಡುತ್ತಾರೆ. ಕವಯಿತ್ರಿ ಶ್ರೀದೇವಿ ಕೆರೆಮನೆ ಅವರು ಅಭಿನಂದನಾ ನುಡಿಗಳನ್ನಾಡುತ್ತಾರೆ. ಭಾರತೀಯ ವಿದ್ಯಾಭವನದ ಅಧ್ಯಕ್ಷ ಕೆ.ಜಿ. ರಾಘವನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ. ಟ್ರಸ್ಟ್ನ ಗೌರವಾಧ್ಯಕ್ಷ ಅನಿಲ್ ಗೋಕಾಕ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.