ಆನೇಕಲ್: ಪಟ್ಟಣದ ಸಮೀಪದ ಕಾವಲಹೊಸಹಳ್ಳಿ ಅಂಬೇಡ್ಕರ್ ಭವನದಲ್ಲಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಪ್ರಯುಕ್ತ ಸಂವಿಧಾನ ಜಾಗೃತಿ ದಿನೋತ್ಸವ ಕಾರ್ಯಕ್ರಮ ಮಂಗಳವಾರ ನಡೆಯಿತು.

ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಆನೇಕಲ್ ಕೃಷ್ಣಪ್ಪ ಮಾತನಾಡಿ, ‘ಸಂವಿಧಾನದ ಮೂಲಕ ಸಮಾಜದಲ್ಲಿ ದಮನಿತರಿಗೆ ಅಂಬೇಡ್ಕರ್ ಧ್ವನಿಯಾಗಿದ್ದಾರೆ. ಸಂವಿಧಾನದ ಆಶಯ ಸಮರ್ಥವಾಗಿ ಈಡೇರಿಸುವುದು ನಮ್ಮೆಲ್ಲರ ಜವಾಬ್ದಾರಿ. ಅಂಬೇಡ್ಕರ್ ಅವರ ಸಾಧನೆಯನ್ನು ಮುಂದಿನ ಪೀಳಿಗೆಗೆ ತಲುಪಿಸಲು ಕೇಂದ್ರ ಸರ್ಕಾರ ನೋಟಿನ ಮೇಲೆ ಅವರ ಭಾವಚಿತ್ರ ಮುದ್ರಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮನ್ವಯತೆಯಿಂದ ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯವಾಗಿ ಅಳವಡಿಸಬೇಕು. ಕರ್ನಾಟಕದ ಒಂದು ವಿಶ್ವವಿದ್ಯಾಲಯಕ್ಕೆ ಅಂಬೇಡ್ಕರ್ ಹೆಸರಿಡಬೇಕು’ ಎಂದು ಒತ್ತಾಯಿಸಿದರು.

ಆನೇಕಲ್ ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದೆ. ಆದರೆ, ಇಲ್ಲಿಯೇ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಶಾಸಕರು ಮತ್ತು ಸಮಾಜ ಕಲ್ಯಾಣ ಸಚಿವರು ಕ್ರಮವಹಿಸಿ ಈ ಭವನದ ಕಾಮಗಾರಿ ಶೀಘ್ರದಲ್ಲೇ ಉದ್ಘಾಟಿಸಬೇಕು. ಇಲ್ಲವಾದರೆ ಸಂಘಟನೆಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಂಘಟನೆ ತಾಲ್ಲೂಕು ಅಧ್ಯಕ್ಷ ಕೊಪ್ಪಗೇಟ್ ರವಿ ಮಾತನಾಡಿ, ‘ಅಂಬೇಡ್ಕರ್ ಸ್ವಾಭಿಮಾನದ ಸಂಕೇತ. ಅವರ ಚಿಂತನೆಗಳು ಸಮಾಜದ ಎಲ್ಲ ವರ್ಗಗಳ ಸಮಗ್ರ ಅಭಿವೃದ್ಧಿಯನ್ನು ಹೊಂದಿವೆ. ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮೂರು ಮೂಲಮಂತ್ರಗಳನ್ನು ನೀಡುವ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ’ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಗುರುಮೂರ್ತಿ, ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಸರೋಜಮ್ಮ, ಪಿವಿಸಿ ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷ ಹಳೇಹಳ್ಳಿ ರವಿ, ಉಪಾಧ್ಯಕ್ಷ ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷ ರಜಿಯಾ ಬೇಗಂ ಸೇರಿದಂತೆ ಹರಿನಗರ ಬಸವರಾಜು, ವೆಂಕಟೇಶ್, ಲವ, ಸಂಪಿಗೆಹಳ್ಳಿ ದೊರೆ, ಬಳ್ಳೂರು ರಮೇಶ್, ಶಿವಮ್ಮ, ಪ್ರಭಾಕರ್, ಪರಶುರಾಮ್, ಜಯರಾಮ್, ಸೀತಾ, ಕೆ.ವಿ.ರಮೇಶ್, ನೇತ್ರಾವತಿ, ಮಂಜುಳ, ಲಕ್ಷ್ಮಿ, ಮಮತಾ, ಸಂತೋಷ್, ನಾಗರಾಜು, ರೂಪಾ, ಚೈತ್ರ, ಮುನಿರತ್ನ ಮುಂತಾದ ಮುಖಂಡರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-15-1169296912

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.