ಆನೇಕಲ್: ತಾಲ್ಲೂಕಿನ ವಿವಿಧೆಡೆ ಮುಸ್ಲಿಮರು ಈದ್-ಉಲ್-ಅದಾ (ಬಕ್ರೀದ್) ಹಬ್ಬವನ್ನು ಗುರುವಾರ ಆಚರಿಸಲಾಯಿತು.

ವಿವಿಧೆಡೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಪ್ರಾರ್ಥನೆಯಲ್ಲಿ ಪುಟಾಣಿ ಮಕ್ಕಳು ಗಮನ ಸೆಳೆದರು.

ಈದ್ಗಾ ಮೈದಾನದಲ್ಲಿ ಗುರುವಾರ ಬೆಳಗ್ಗೆ ನೂರಾರು ಮುಸ್ಲಿಮರು ಜಮಾವಣೆಗೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಆನೇಕಲ್, ಬೊಮ್ಮಸಂದ್ರ ಬಾಂಗ್ಲಪೇಟೆ, ಗೌರೇನಹಳ್ಳಿ, ಅಡಿಗಾರಕಲ್ಲಹಳ್ಳಿ,ಅತ್ತಿಬೆಲೆ ಸೇರಿದಂತೆ ವಿವಿಧೆಡೆ ಸಾಮೂಹಿಕ ಪ್ರಾರ್ಥನೆ ನಡೆಯಿತು.

ಪಟ್ಟಣದ ಎರಡು ಕಡೆಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಪುಟಾಣಿಗಳು ಪರಸ್ಪರ ಅಪ್ಪಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು. ಆನೇಕಲ್-ಜಿಗಣಿ ರಸ್ತೆಯಲ್ಲಿರುವ ಮಸೀದಿಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಪ್ರಾರ್ಥನೆ ಸಲ್ಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-15-1400714466

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.