ಆನೇಕಲ್: ಪಟ್ಟಣದ ತಿಮ್ಮರಾಯಸ್ವಾಮಿ ದೇವಾಲಯದ ರಸ್ತೆಯಲ್ಲಿ ಅಡ್ಡ ಬಂದ ಕಾರನ್ನು ‘ಹಿಂದಕ್ಕೆ ತೆಗೆದುಕೋ’ ಎಂದು ಹೇಳಿದಕ್ಕೆ ಕೋಪಗೊಂಡ ಯುವಕರಿಬ್ಬರು ತಂದೆ, ಮಗನಿಗೆ ಚಾಕುವಿನಿಂದ ಇರಿದ್ದಿದು, ಆರೋಪಿಯನ್ನು ಬಂಧಿಸಲಾಗಿದೆ.

ನವೀನ್ (42), ಇವರ ಪುತ್ರ ತಾರಕೇಶ್ ಗೌಡ(16) ಚಾಕು ಇರಿತಕ್ಕೆ ಒಳಾಗದವರು. ಆನೇಕಲ್ನ ಆದಿ ಬಂಧಿತ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನವೀನ್ ಮತ್ತು ತಾರಕೇಶ್ ಗೌಡ ಪಟ್ಟಣದ ತಿಮ್ಮರಾಯಸ್ವಾಮಿ ದೇವಾಲಯದ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾರೊಂದು ಎದುರುಗಡೆಯಿಂದ ಬಂದಿದೆ. ಈ ವೇಳೆ ‘ಕಾರನ್ನು ಹಿಂದಕ್ಕೆ ತೆಗೆದುಕೊಳ್ಳಿ ನಾವು ಮುಂದೆ ಹೋಗುತ್ತೇವೆ’ ಎಂದಿದ್ದಕ್ಕೆ ನಶೆಯಲ್ಲಿದ್ದ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಚಾಕುವಿನಿಂದ ನವೀನ್ ಹೊಟ್ಟೆ ಭಾಗಕ್ಕೆ ಇರಿದಿದ್ದಾರೆ. ಈ ಸಮಯದಲ್ಲಿ ತಾರಕೇಶ್ಗೂ ಚಾಕುವಿನಿಂದ ಇರಿಯಲಾಗಿದೆ.

ಸ್ಥಳೀಯರು ಚಾಕು ಇರಿದ ಯುವಕನನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಮತ್ತೊಬ್ಬ ಆರೋಪಿ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ನಶೆ ಗುಂಗಿನಲ್ಲಿ ಚಾಕು ಇರಿದಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-18-856534487

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.