ಆನೇಕಲ್: ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಳಕ್ಕಾಗಿ ಸ್ನೇಹಿತರ ಬಳಗದಿಂದ ತಾಲ್ಲೂಕಿನ ಗಡಿ ಶಾಲೆಗಳಾದ ಸೋಲೂರು ಮತ್ತು ಚೂಡೇನಹಳ್ಳಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶಾಲಾ ಪರಿಕರ ವಿತರಿಸಲಾಯಿತು.

ಸ್ನೇಹಿತರ ಬಳಗದ ಮಹೇಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆಯಾಗುತ್ತಿದೆ. ಬಡ ಕುಟುಂಬಗಳು ಸಾಲ ಮಾಡಿಯಾದರೂ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಬೇಕು ಎಂಬ ಮನಸ್ಥಿತಿ ಹೊಂದಿದ್ದಾರೆ. ಸರ್ಕಾರಿ ಶಾಲೆಗಳಿಗೆ ಅವಶ್ಯ ಇರುವ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸ್ನೇಹಿತ ಬಳಗ ಕಾರ್ಯನಿರ್ವಹಿಸಲಿದೆ ಎಂದರು.

ಸ್ನೇಹಿತರ ಬಳಗ ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಉಚಿತ ದಾಸೋಹ ಕೇಂದ್ರ ತೆರೆಯಲಾಗಿದೆ. ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಆಯೋಜಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.

ವಕೀಲ ಪುರುಷೋತ್ತಮ್ ಚಿಕ್ಕಹಾಗಡೆ, ಮುಖಂಡರಾದ ಆಕಾಶ್, ಆನಂದ್, ಅಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-15-1395387191

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.