ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಸ್ಥಾನಮಾನಕ್ಕಾಗಿ ಬೇಡಿಕೆ: ಅಂಗನವಾಡಿ ಕಾರ್ಯಕರ್ತೆಯರ ಹೋರಾಟ ಮುಂದುವರಿಕೆ

Last Updated 19 ಜನವರಿ 2023, 23:09 IST
ಅಕ್ಷರ ಗಾತ್ರ

ಬೆಂಗಳೂರು: ‘ಅಂಗನವಾಡಿ ಕಾರ್ಯಕರ್ತೆಯರಿಗೆ ಶಿಕ್ಷಕರ ಸ್ಥಾನಮಾನ ನೀಡಬೇಕು’ ಎಂದು ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿರುವ ಪ್ರತಿಭಟನೆ ಗುರುವಾರ ಎರಡನೇ ದಿನ ಪೂರೈಸಿತು.

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೇತೃತ್ವದಲ್ಲಿ ಬುಧವಾರದಿಂದ ಪ್ರತಿಭಟನೆ ಆರಂಭಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರು ಪ್ರತಿಭಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿದರು. ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿದ ಅವರು, ‘ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು. ಸದ್ಯ ಪ್ರತಿಭಟನೆ ಕೈಬಿಡಿ’ ಎಂದು ಕೋರಿದರು.

ಅದಕ್ಕೆ ಒಪ್ಪದ ಪ್ರತಿಭಟನಕಾರರು, ‘ಮುಖ್ಯಮಂತ್ರಿ ಅವರು ಪ್ರತಿಭಟನಾ ಸ್ಥಳಕ್ಕೆ ಬರಬೇಕು. ನಮ್ಮ ಬೇಡಿಕೆಗಳನ್ನು ಆಲಿಸಿ, ಅವುಗಳನ್ನು ಈಡೇರಿಸಲು ಲಿಖಿತ ಭರವಸೆ ನೀಡಬೇಕು. ಅಲ್ಲಿಯವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ’ ಎಂದು ಪಟ್ಟು ಹಿಡಿದರು. ನಂತರ, ಸಚಿವರು ಸ್ಥಳದಿಂದ ಹೊರಟು ಹೋದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ಉದ್ಯಾನದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವರು, ಮಕ್ಕಳನ್ನೂ ತಮ್ಮ ಜೊತೆ ಕರೆತಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT