ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘದಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಫೆಬ್ರುವರಿ 26ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

‘ಗೌರವಧನ ಮಾಸಿಕ ₹15,000ಕ್ಕೆ ಹೆಚ್ಚಳ ಹಾಗೂ ನಿವೃತ್ತಿ ಪರಿಹಾರ ₹2 ಲಕ್ಷ ನೀಡುವುದಾಗಿ 2026-27ನೇ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡುವಂತೆ ಒತ್ತಾಯಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಗುವುದು’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ, ಕಾರ್ಯದರ್ಶಿ ಎಂ. ಉಮಾದೇವಿ ತಿಳಿಸಿದ್ದಾರೆ.

ನಿವೃತ್ತಿಯಾದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಆದೇಶದಂತೆ ಗ್ರ್ಯಾಚುಟಿ ನೀಡುವ ಜತೆಗೆ ನಿರ್ಬಂಧಗಳನ್ನು ತೆಗೆದು ಹಾಕಬೇಕು. ಅಂಗನವಾಡಿ ನೌಕರರನ್ನು ಗುಜರಾತ್ ಹೈಕೋರ್ಟ್ ಆದೇಶದಂತೆ ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂದು ತ್ತಾಯಿಸಿದ್ದಾರೆ.

ಸಮಸ್ಯೆಯನ್ನು ಬಗೆಹರಿಸಿ ಸರಳವಾಗಿ ನಿವೃತ್ತಿ ಪರಿಹಾರದ ಹಣ ಸಿಗುವಂತೆ ಸೂಕ್ತ ಕ್ರಮವಹಿಸಬೇಕು. ನೌಕರರನ್ನು ಸರ್ಕಾರದ ಪಿಂಚಣಿ ಯೋಜನೆಗೆ ಒಳಪಡಿಸಬೇಕು. ಅಲ್ಲಿಯವರೆಗೂ ನಿವೃತ್ತಿ ಪರಿಹಾರದ ಇಡುಗಂಟು ₹5 ಲಕ್ಷ ನಿಗದಿ ಮಾಡಬೇಕು. ಸೇವಾ ಹಿರಿತನ ಆಧರಿಸಿ ಶೇ 50ರಷ್ಟು ಹುದ್ದೆಗಳನ್ನು ಬಡ್ತಿ ಮೂಲಕ ಹಾಗೂ ಮೆರಿಟ್ ಆಧರಿಸಿ ಶೇ 50ರಷ್ಟು ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಐಸಿಡಿಎಸ್ ಹೊರತುಪಡಿಸಿ ಇತರ ಇಲಾಖೆಗಳ ಹೆಚ್ಚುವರಿ ಕೆಲಸ ನೀಡಬಾರದು. ಪ್ರತಿ ತಿಂಗಳು 5ರೊಳಗೆ ಮಾಸಿಕ ವೇತನ ಪಾವತಿ ಮಾಡಬೇಕು. ಖಾಲಿ ಇರುವ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಬೇಕು. ಮಾತೃ ವಂದನಾ, ಭಾಗ್ಯಲಕ್ಷ್ಮಿ ಯೋಜನೆಯ ಕೆಲಸಗಳಿಗೆ ಹೆಚ್ಚುವರಿ ಗೌರವಧನ ನೀಡಬೇಕು ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.