ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ: ಆರನೇ ಗ್ಯಾರಂಟಿ ಈಡೇರಿಕೆಗಾಗಿ ಪ್ರತಿಭಟನೆ

Published 27 ಜೂನ್ 2023, 15:43 IST
Last Updated 27 ಜೂನ್ 2023, 15:43 IST
ಅಕ್ಷರ ಗಾತ್ರ

ಬೆಂಗಳೂರು: ‘ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ₹ 15 ಸಾವಿರ ಹಾಗೂ ಸಹಾಯಕಿಯರಿಗೆ ಮಾಸಿಕ ₹ 10 ಸಾವಿರ ಗೌರವಧನ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್‌ನ 6ನೇ ಗ್ಯಾರಂಟಿಯನ್ನು ಕೂಡಲೇ ಈಡೇರಿಸಬೇಕು’ ಎಂದು ಒತ್ತಾಯಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ರಾಜ್ಯದ ಹಲವು ಜಿಲ್ಲೆಗಳ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

‘ಬಹುಮತದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿ ನಂಬಿಕೆ ಉಳಿಸಿಕೊಳ್ಳಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

‘ಅಂಗನವಾಡಿ ಕೆಲಸಗಳನ್ನು ಹೊರತುಪಡಿಸಿ, ಬೇರೆ ಕೆಲಸಗಳಿಗೆ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಬಳಸಿಕೊಳ್ಳಬಾರದು. ನಮಗೆ ನೀಡಿರುವ ಮೊಬೈಲ್‌ಗಳು ಹಾಳಾಗಿದ್ದು, ಅವುಗಳನ್ನು ಹಿಂಪಡೆದು ಹೊಸ ಮೊಬೈಲ್ ಅಥವಾ ಮಿನಿ ಟ್ಯಾಬ್‌ಗಳನ್ನು ನೀಡಬೇಕು. ಮೊಟ್ಟೆ ಖರೀದಿ ಜವಾಬ್ದಾರಿಯನ್ನು ಬಾಲ ವಿಕಾಸ ಸಮಿತಿಗೆ ವಹಿಸಬೇಕು’ ಎಂದು ಅವರು ಆಗ್ರಹಿಸಿದರು.

‘ನಿವೃತ್ತರಿಗೆ ₹ 3 ಲಕ್ಷ ಇಡುಗಂಟು ಜಾರಿಗೊಳಿಸಬೇಕು. ತಿಂಗಳಿಗೆ ₹ 5 ಸಾವಿರ ಪಿಂಚಣಿ ನೀಡಬೇಕು. ನಮ್ಮೆಲ್ಲ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸಬೇಕು. ಇಲ್ಲದಿದ್ದರೆ, ಗಂಭೀರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದು ಪ್ರತಿಭಟನಕಾರರು ಎಚ್ಚರಿಸಿದರು.

ಸಚಿವರಿಗೆ ಮನವಿ ಸಲ್ಲಿಕೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಭೇಟಿಯಾದ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.

‘ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು’ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT