ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರಿಕೆ

Last Updated 27 ಜನವರಿ 2023, 22:25 IST
ಅಕ್ಷರ ಗಾತ್ರ

ಬೆಂಗಳೂರು: ಗ್ರ್ಯಾಚ್ಯುಟಿ ಪಾವತಿ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರಕ್ಕೆ ಐದು ದಿನ ಪೂರೈಸಿತು.

ಸ್ವಾತಂತ್ರ್ಯ ಉದ್ಯಾನದಲ್ಲಿ ಸ್ಥಳದ ಕೊರತೆಯ ಕಾರಣಕ್ಕೆ ಗಾಂಧಿ ನಗರದ ರಸ್ತೆಗೆ ಬಂದು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಆರಂಭಿಸಿದ್ದಾರೆ. ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಧರಣಿ ನಡೆಸುತ್ತಿದ್ಧಾರೆ.

ಸಿಐಟಿಯು (ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್) ಅಧೀನದ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಶುಕ್ರವಾರವೂ ಬೇರೆ ಬೇರೆ ಜಿಲ್ಲೆಗಳಿಂದ ಬಂದ ಮತ್ತಷ್ಟು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆಗೆ ಸೇರಿಕೊಂಡರು.

ಸರ್ಕಾರವು ಬೇಡಿಕೆ ಈಡೇರಿಸುವ ತನಕ ಈ ಉದ್ಯಾನ ಬಿಟ್ಟು ಕದಲುವುದಿಲ್ಲ ಎಂದು ಅವರು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT