ಮಂಗಳವಾರ, ಜನವರಿ 28, 2020
29 °C

‘ಅನಿಕೇತನ’ ಪ್ರಶಸ್ತಿಗೆ ದ್ವಾರಕಾನಾಥ್ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಜನ್ಮದಿನದ ಹಿನ್ನೆಲೆಯಲ್ಲಿ ಕನ್ನಡ ಸಂಘರ್ಷ ಸಮಿತಿ ನೀಡುವ ‘ಅನಿಕೇತನ ಪ್ರಶಸ್ತಿ’ಗೆ ಹಿರಿಯ ವಕೀಲ ಸಿ.ಎಸ್.ದ್ವಾರಕಾನಾಥ್ ಆಯ್ಕೆಯಾಗಿದ್ದಾರೆ. 

ಈ ಪ್ರಶಸ್ತಿಯು ₹ 5 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ‘ನಂ.ನಂಜಪ್ಪ ಚಿರಂತನ ಪ್ರಶಸ್ತಿ’ಗೆ ವಿಚಾರವಾದಿಗಳ ಸಂಘದ ಅಧ್ಯಕ್ಷ ಎ.ಎಸ್.ನಟರಾಜ್ ಅವರ ‘ಮೌಢ್ಯ ಮತ್ತು ವೈಚಾರಿಕತೆ’ ಕೃತಿ ಆಯ್ಕೆಯಾಗಿದೆ. ಈ ಪ್ರಶಸ್ತಿ ₹ 5 ಸಾವಿರ ನಗದು ಬಹುಮಾನ ಒಳಗೊಂಡಿದೆ.

‘ಕುವೆಂಪು ಯುವಕವಿ ಪ್ರಶಸ್ತಿ’ಗೆ ಚಾಂದ್‍ಪಾಷ ಆಯ್ಕೆಯಾಗಿದ್ದು, ಪ್ರಶಸ್ತಿಯು ₹ 1 ಸಾವಿರ ನಗದು ಬಹುಮಾನ ಹಾಗೂ ಫಲಕ ಒಳಗೊಂಡಿದೆ. 

ಜ.10ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು