ಆನೇಕಲ್ ಕ್ಷೇತ್ರ ವ್ಯಾಪ್ತಿಯಲ್ಲಿ ಐದು ಕೈಗಾರಿಕ ಪ್ರದೇಶಗಳಿವೆ. ಕೈಗಾರಿಕೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಭಾರಿ ಮಳೆಯಿಂದ ರಸ್ತೆ ಗುಂಡಿಗಳಾಗಿವೆ. ಹಾಗಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಉಪಮುಖ್ಯಮಂತ್ರಿಗಳು ಸೂಚನೆ ನೀಡಿದ್ದು ಮಳೆ ನಿಂತ ನಂತರ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಚಂದಾಪುರ-ಆನೇಕಲ್ ರಸ್ತೆಯನ್ನು ವೇಗವಾಗಿ ಅಭಿವೃದ್ಧಿ ಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.