ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಕ್ಷ್ಮಿ ಪೂಜೆಗಿಟ್ಟಿದ್ದ ಆಭರಣ ಕಳವು: ಆರೋಪಿ ಬಂಧನ

Last Updated 30 ಅಕ್ಟೋಬರ್ 2022, 4:40 IST
ಅಕ್ಷರ ಗಾತ್ರ

ಬೆಂಗಳೂರು: ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿ ಮೊಹಮ್ಮದ್ ತೌಹಿದ್ (20) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

‘ಬನ್ನೇರುಘಟ್ಟ ರಸ್ತೆಯ ಬಸವನಪುರದ ತೌಹಿದ್, ಅಪರಾಧ ಹಿನ್ನೆಲೆಯುಳ್ಳವ. 2021ರ ಆಗಸ್ಟ್ 20ರಂದು ರಾತ್ರಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ ಈತನನ್ನು ಬಂಧಿಸಲಾಗಿದೆ. ₹ 5 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಶ್ರೀಗಂಧಕಾವಲು ಬಳಿಯ ‘ಡಿ’ ಗ್ರೂಪ್ ಬಡಾವಣೆಯಲ್ಲಿರುವ ಎಂಜಿನಿಯರೊಬ್ಬರ ಮನೆಯಲ್ಲಿ ವರ ಮಹಾಲಕ್ಷ್ಮಿ ಹಬ್ಬದ ನಿಮಿತ್ತ ಲಕ್ಷ್ಮಿ ಪೂಜೆ ಮಾಡಲಾಗಿತ್ತು. ಅಲಂಕಾರಕ್ಕಾಗಿ ಚಿನ್ನಾಭರಣ ಹಾಕಲಾಗಿತ್ತು. ಪೂಜೆ ಮುಗಿದ ಬಳಿಕ ಮನೆಯವರೆಲ್ಲ ಮಲಗಿದ್ದರು.’

‘ತಡರಾತ್ರಿ ಮನೆಗೆ ನುಗ್ಗಿದ್ದ ಆರೋಪಿ, ಪೂಜೆಗಿಟ್ಟಿದ್ದ ಚಿನ್ನಾಭರಣ ಕದ್ದುಕೊಂಡು ಪರಾರಿಯಾಗಿದ್ದ. ಕಳ್ಳತನ ಬಗ್ಗೆ ಎಂಜಿನಿಯರ್ ದೂರು ನೀಡಿದ್ದರು. ಆರೋಪಿ ಕೃತ್ಯದ ಬಗ್ಗೆ ಆರಂಭದಲ್ಲಿ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇತ್ತೀಚೆಗೆ ತೌಹಿದ್‌ನನ್ನು ಬೇರೆ ಠಾಣೆ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆತನನ್ನು ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಪಡೆದು ವಿಚಾರಿಸಿದಾಗ, ತಪ್ಪೊಪ್ಪಿಕೊಂಡ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT