ಶಾಸಕರ ಆಪ್ತ ಸಹಾಯಕಿ ಹುದ್ದೆ ಗಿಟ್ಟಿಸಿದ್ದ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸೋಲೂರು ನಿವಾಸಿ ಕೆ.ಸಿ.ವಿನುತಾ ಅವರ ಪತಿ ಸ್ವಾಮಿಯನ್ನು ಭಾನುವಾರ ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿ ಸ್ವಾಮಿ, ಶಾಸಕ ಎಸ್.ರಘು ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ಅಂಜನ್ ಕುಮಾರ್ ಎಂಬಾತನಿಗೆ ಕೆಲಸ ಕೊಡಿಸಿದ್ದ ಸಂಗತಿಯನ್ನು ತಿಳಿಸಿದ್ದ. ಇಬ್ಬರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆಗೆ ಬರುವಂತೆ ವಿನುತಾಗೂ ನೋಟಿಸ್ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.