ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ಐಟಿ ಸೆಲ್ ಸಂಚಾಲಕ ಪ್ರಶಾಂತ್‌ ಮಾಕನೂರ್‌ಗೆ ನಿರೀಕ್ಷಣಾ ಜಾಮೀನು

Published 11 ಮೇ 2024, 16:21 IST
Last Updated 11 ಮೇ 2024, 16:21 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಂಗ್ರೆಸ್‌ ನಾಯಕರನ್ನು ಕೀಳಾಗಿ ಬಿಂಬಿಸಿ, ಧರ್ಮ, ಸಮುದಾಯಗಳ ನಡುವೆ ದ್ವೇಷ ಹುಟ್ಟಿಸುವ ರೀತಿಯಲ್ಲಿ ಅನಿಮೇಟೆಡ್‌ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ಐಟಿ ಸೆಲ್‌ ಸಂಚಾಲಕ ಪ್ರಶಾಂತ್‌ ಮಾಕನೂರ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಈ ಸಂಬಂಧ ಪ್ರಶಾಂತ್‌ ಮಾಕನೂರು ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪುರಸ್ಕರಿಸಿದ್ದಾರೆ.

ಪ್ರಕರಣವೇನು?: ‘ಕಾಂಗ್ರೆಸ್‌ ಪಕ್ಷದ ನಾಯಕರನ್ನು ಸಮಾಜಗಳ ನಡುವೆ ದ್ವೇಷ ಹರಡುವ ರೀತಿ ಬಿಂಬಿಸಿ ಅನಿಮೇಟೆಡ್‌ ವಿಡಿಯೊ ಪ್ರಸಾರ ಮಾಡಲಾಗಿದೆ’ ಎಂದು ಆಕ್ಷೇಪಿಸಿ ಕಾಂಗ್ರೆಸ್‌ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್‌ ಬಾಬು ಇದೇ 5ರಂದು ಬಿಜೆಪಿ ರಾಷ್ಟ್ರೀಯ ಮುಖಂಡರ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಇದರನ್ವಯ
ಐಪಿಸಿ-1860ರ ಕಲಂ 505 (2) ಮತ್ತು ಪ್ರಜಾಪ್ರತಿನಿಧಿ ಕಾಯ್ದೆ-1951ರ ಕಲಂ 125ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ರಾಷ್ಟ್ರೀಯ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಅಮಿತ್‌ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.

ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT