ಸೆ.6 ರಂದು ಬಿಜೆಪಿ ಧರಣಿ

7

ಸೆ.6 ರಂದು ಬಿಜೆಪಿ ಧರಣಿ

Published:
Updated:

ಬೆಂಗಳೂರು: ವಕ್ಫ್‌ ಆಸ್ತಿ ಕಬಳಿಕೆ ಕುರಿತಂತೆ ಅನ್ವರ್‌ ಮಾಣಿಪ್ಪಾಡಿ ವರದಿಯನ್ನು ವಿಧಾನಮಂಡಲದಲ್ಲಿ ಮಂಡಿಸಲು ಹೈಕೋರ್ಟ್‌ ಸೂಚನೆ ಪಾಲಿಸಬೇಕು ಎಂದು ಬಿಜೆಪಿ ಮುಖಂಡ, ವಿಧಾನಪರಿಷತ್‌ ವಿರೋಧಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಧಾನಮಂಡಲದಲ್ಲಿ ವರದಿಯನ್ನು ಮಂಡಿಸುವುದಾಗಿ ನ್ಯಾಯಾಲಯಕ್ಕೆ ಸರ್ಕಾರ ಲಿಖಿತ ಭರವಸೆ ನೀಡಿತ್ತು. ಆದರೆ, ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸರ್ಕಾರದ ನಡವಳಿಕೆ ನ್ಯಾಯಾಂಗ ನಿಂದನೆ ಆಗಿದೆ. ಆದರೂ ಹೈಕೋರ್ಟ್‌ ಸರ್ಕಾರಕ್ಕೆ ಇನ್ನೊಂದು ಅವಕಾಶವನ್ನು ನೀಡಿದೆ. ನಾಲ್ಕು ವಾರಗಳಲ್ಲಿ ವರದಿ ಮಂಡಿಸುವಂತೆ ಆಗಸ್ಟ್‌ 30ರ ತೀರ್ಪಿ ನಲ್ಲಿ  ನಿರ್ದೇಶನ ನೀಡಿದೆ ಎಂದರು.

ಈ ಬೇಡಿಕೆ ಮುಂದಿಟ್ಟುಕೊಂಡು ಸೆ.6 ರಂದು ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗುವುದು. ಅದಕ್ಕೂ ಮಣಿ ಯದೇ ಇದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗು ವುದು ಎಂದು ತಿಳಿಸಿದರು.

ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ, ‘ ಈ ವಿಷಯಕ್ಕೆ ಸಂಬಂಧಿಸಿದಂತೆ ಹೋರಾಟವನ್ನು ನಿಲ್ಲಿಸುವುದಿಲ್ಲ’ ಎಂದರು.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !