ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು ಶಿಕ್ಷಕರ ಕ್ಷೇತ್ರ: ಎ.ಪಿ.ರಂಗನಾಥ್ ಮೈತ್ರಿ ಅಭ್ಯರ್ಥಿ?

Published 18 ಜನವರಿ 2024, 16:23 IST
Last Updated 18 ಜನವರಿ 2024, 16:23 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್‌–ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಕಣಕ್ಕೆ ಇಳಿಯಲಿದ್ದಾರೆ ಎಂದು ಜೆಡಿಎಸ್‌ ಮುಖಂಡ ಎಚ್‌.ಎಂ.ರಮೇಶ್‌ ಗೌಡ ಹೇಳಿದರು.

ಜೆಪಿ ಭವನದಲ್ಲಿ ಗುರುವಾರ ನಡೆದ ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಪಕ್ಷದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

'ಮಿತ್ರಪಕ್ಷವಾದ ಬಿಜೆಪಿ ಕಾರ್ಯಕರ್ತರು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು. ಕಾಂಗ್ರೆಸ್ ಆಡಳಿತಕ್ಕೆ ಶಿಕ್ಷಕರು ರೋಸಿ ಹೋಗಿದ್ದಾರೆ. ಶಿಕ್ಷಣ ಹಾಗೂ ಶಿಕ್ಷಕರ ಬಗ್ಗೆ ಸರ್ಕಾರದ ಅಸಡ್ಡೆ ಅಪಾಯಕಾರಿಯಾಗಿದೆ. ಈ ವಿಷಯಗಳನ್ನು ಶಿಕ್ಷಕರ ಗಮನಕ್ಕೆ ತರಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಹೇಳಿದರು.

ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಲೀಲಾದೇವಿ ಆರ್. ಪ್ರಸಾದ್‌, ಅಭ್ಯರ್ಥಿ ಎ.ಪಿ.ರಂಗನಾಥ್‌, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಹಿರಿಯ ಮುಖಂಡರಾದ ಮಂಜುನಾಥ್‌, ರಾಜ್ಯ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಸಯ್ಯದ್‌ ರೋಷನ್ ಅಬ್ಬಾಸ್‌, ಯುವ ಮುಖಂಡ ಪ್ರವೀಣ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT