ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ: ಹೊರಗೆ ಓಡೋಡಿ ಬಂದ ನಿವಾಸಿಗಳು

Last Updated 17 ನವೆಂಬರ್ 2021, 11:27 IST
ಅಕ್ಷರ ಗಾತ್ರ

ಬೆಂಗಳೂರು:ಎಲೆಕ್ಟ್ರಾನಿಕ್‌ ಸಿಟಿಯವಸುಂಧರಾ ಲೇಔಟ್‌ನ ವಸತಿ ಸಮುಚ್ಚಯದಲ್ಲಿ ಮಂಗಳವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ.

ಸಮುಚ್ಚಯದಲ್ಲಿ ಬೆಂಕಿ ಹೊತ್ತಿಕೊಂಡಿರುವುದು ತಿಳಿದೊಡನೆಯೇಫ್ಲ್ಯಾಟ್‌ಗಳಲ್ಲಿದ್ದವರೆಲ್ಲಾ ಓಡೋಡಿ ಹೊರಗೆ ಬಂದಿದ್ದಾರೆ.ವಿ ಮ್ಯಾಕ್ಸ್‌ ಚಾಲೇಟ್‌ ವಸತಿ ಸಮುಚ್ಚಯದಲ್ಲಿ ಆವರಿಸಿದ್ದ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಡುತ್ತಿದ್ದ ದೃಶ್ಯ ಕಂಡುಬಂತು.

ಸಿಲಿಂಡರ್‌ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿರುವ ಅನುಮಾನವಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಬೆಂಕಿಯಿಂದಾಗಿ ಫ್ಲ್ಯಾಟ್‌ವೊಂದರಲ್ಲಿದ್ದ ಸಾಮಾನು ಸರಂಜಾಮುಗಳು ಸುಟ್ಟು ಹೋಗಿದ್ದು ಸುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT