ಬೆಂಗಳೂರು: ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನ ಡಿಕ್ಕಿಯಿಂದ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಪುರುಷನ ಗುರುತು ಪತ್ತೆಯಾಗಿಲ್ಲ. 35ರಿಂದ 40 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ.
ತುಮಕೂರು ರಸ್ತೆಯಿಂದ ಹೊಸೂರು ರಸ್ತೆ ಕಡೆಗೆ ನಡೆದು ತೆರಳುತ್ತಿರುವಾಗ ವೇಗವಾಗಿ ಬಂದ ವಾಹನ ಡಿಕ್ಕಿಯಾಗಿದೆ. ವಾಹನ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದ್ದು, ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಕ್ಕಿಯ ರಭಸಕ್ಕೆ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.