ಆ್ಯಪ್ ಹೂಡಿಕೆ: ₹ 2.40 ಲಕ್ಷ ವಂಚನೆ
ಬೆಂಗಳೂರು: ಆ್ಯಪ್ ಮೂಲಕ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಬರುವುದಾಗಿ ಆಮಿಷವೊಡ್ಡಿ ನಗರದ ಮಹಿಳೆಯೊಬ್ಬರನ್ನು ವಂಚಿಸಲಾಗಿದ್ದು, ಈ ಬಗ್ಗೆ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಹಳ್ಳಿಯ 39 ವರ್ಷದ ಮಹಿಳೆ ದೂರು ನೀಡಿದ್ದಾರೆ.
‘ಐಬಿಎಂ68 ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುವುದಾಗಿ ಸ್ನೇಹಿತರೊಬ್ಬರು ಮಹಿಳೆಗೆ ಹೇಳಿದ್ದರು. ಅದನ್ನು ನಂಬಿದ್ದ ಅವರು, ಹಣ ಹೂಡಿಕೆ ಮಾಡಿದ್ದರು. ನಿಗದಿತ ಸಮಯಕ್ಕೆ ಯಾವುದೇ ಲಾಭ ಬಂದಿರಲಿಲ್ಲ. ಅಸಲು ಸಹ ವಾಪಸು ಸಿಕ್ಕಿರಲಿಲ್ಲ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಆ್ಯಪ್ ಸೃಷ್ಟಿಸಿರುವ ಕೆಲವರು ಜನರಿಂದ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿರುವಾಗಿ ಮಹಿಳೆ ದೂರುತ್ತಿದ್ದಾರೆ. ಕೆಲ ಆ್ಯಪ್ಗಳ ಹೆಸರು ನೀಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ’ ಎಂದೂ ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.