ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಎಸ್‌ಎಂಎಸ್ ಮೂಲಕ ಮನವಿ

Published 22 ಏಪ್ರಿಲ್ 2024, 15:37 IST
Last Updated 22 ಏಪ್ರಿಲ್ 2024, 15:37 IST
ಅಕ್ಷರ ಗಾತ್ರ

ಬೆಂಗಳೂರು: ನಗರ ಜಿಲ್ಲಾ ವ್ಯಾಪ‍್ತಿಯಲ್ಲಿ ಮೊಬೈಲ್‌ ಧ್ವನಿ ಕರೆ (ಐವಿಆರ್‌ಎಸ್) ಹಾಗೂ ಎಸ್ಎಂಎಸ್‌ ಮೂಲಕ ಮತದಾರರಿಗೆ ಮತ ಚಲಾಯಿಸುವಂತೆ ಮನವಿ ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಏಪ್ರಿಲ್‌ 26ರಂದು ಮತದಾನ ಮಾಡಲು ಧ್ವನಿಕರೆ ಹಾಗೂ ಎಸ್‌ಎಂಎಸ್‌ಗಳ ಮೂಲಕವೂ ನೆನಪಿಸಲಾಗುತ್ತಿದೆ ಎಂದು ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸುವವರ ಮಾಹಿತಿ, ಮೊಬೈಲ್‌ ಸಂಖ್ಯೆ ಲಭ್ಯವಿದೆ. ಅದರ ಅನುಸಾರ ಎಲ್ಲರಿಗೂ ಐವಿಆರ್‌ಎಸ್ ಹಾಗೂ ಬಲ್ಕ್ ಎಸ್‌ಎಂಎಸ್ ಮೂಲಕ ಸಂದೇಶ ಕಳುಹಿಸಲಾಗುತ್ತದೆ ಎಂದರು.

‘ಸಕ್ಷಮ್‌’ ನೋಂದಣಿ: ನಗರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿರುವ ಅಂಗವಿಕಲರು ಹಾಗೂ ಹಿರಿಯ ನಾಗರಿಕರು ‘ಸಕ್ಷಮ್’ ತಂತ್ರಾಂಶದ ಮೂಲಕ ಸಾರಿಗೆ ವ್ಯವಸ್ಥೆ ಅವಶ್ಯಕತೆಗೆ ಏಪ್ರಿಲ್‌ 24ರ ಸಂಜೆ 5ರವರೆಗೆ ಕಾಯ್ದಿರಿಸಿಕೊಳ್ಳಬಹುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT