ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ವಿಜಯಪುರ ಜಿಲ್ಲೆ ಮಠಾಧೀಶರಿಂದ ಸಿಎಂಗೆ ಮನವಿ

ವೀರಶೈವ–ಲಿಂಗಾಯತ ಒಳಪಂಗಡಗಳಿಗೆ ಮೀಸಲು
Last Updated 9 ಫೆಬ್ರುವರಿ 2021, 11:50 IST
ಅಕ್ಷರ ಗಾತ್ರ

ಬೆಂಗಳೂರು: ವೀರಶೈವ– ಲಿಂಗಾಯತ ಒಳಪಂಗಡಗಳಿಗೆ ಮೀಸಲಾತಿ ನೀಡಬೇಕು ಎಂದು ವಿಜಯಪುರ ಜಿಲ್ಲಾ ಮಠಾಧೀಶರ ಒಕ್ಕೂಟ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಒತ್ತಾಯಿಸಿದೆ.

ಸುಮಾರು 15 ರಿಂದ 20 ಸ್ವಾಮೀಜಿಗಳು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಈ ಸಂಬಂಧ ಮನವಿಯನ್ನು ಅರ್ಪಿಸಿದೆ. ವೀರಶೈವ ಮತ್ತು ಲಿಂಗಾಯತ ಒಳಪಂಗಡಗಳು ಸಾಮಾಜಿಕವಾಗಿ,ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿವೆ ಎಂದು ಹೇಳಿದರು.

ಆಲಮಟ್ಟಿ ಜಲಾಶಯದ ಹಿನ್ನೀರಿನಿಂದಾಗಿ ನಮ್ಮ ಭಾಗದ ರೈತರು ಮನೆ–ಮಠ, ಜಮೀನನ್ನು ಕಳೆದುಕೊಂಡಿದ್ದಾರೆ. ದಯನೀಯ ಸ್ಥಿತಿಯಲ್ಲಿ ಇದ್ದಾರೆ. ವಿಜಯಪುರ ಜಿಲ್ಲೆ ಬರದ ನಾಡು ಎಂಬ ಹಣೆ ಪಟ್ಟಿ ಕಳಚಿಕೊಳ್ಳಲು ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಬೇಕು. ಚಾಲ್ತಿಯಲ್ಲಿರುವ ಯೋಜನೆಗಳನ್ನು ಬೇಗನೇ ಪೂರ್ಣಗೊಳಿಸಬೇಕು ಎಂದು ಸ್ವಾಮೀಜಿಗಳು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT