ಗುರುವಾರ , ಅಕ್ಟೋಬರ್ 22, 2020
22 °C

ಕಸ ವಿಲೇವಾರಿ ಗುತ್ತಿಗೆ: ಕಾರ್ಯಾದೇಶ ನೀಡದಂತೆ ಹೈಕೋರ್ಟ್‌ಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮನೆ ಮನೆಯಿಂದ ಕಸ ಸಂಗ್ರಹಣೆ ಮತ್ತು ಸಾಗಣೆ ಗುತ್ತಿಗೆ ನೀಡಲು ಕರೆದಿರುವ ಟೆಂಡರ್ ದೋಷಯುಕ್ತವಾಗಿದ್ದು, ಇದನ್ನು ಆಧರಿಸಿ ಕಾರ್ಯಾದೇಶ ನೀಡಬಾರದು ಎಂದು ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

‘ಕೆಟಿಪಿಪಿ ಕಾಯ್ದೆ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಗುತ್ತಿಗೆಯಲ್ಲಿ ಮೀಸಲಾತಿಯನ್ನೂ ನೀಡಿಲ್ಲ’ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬಿಬಿಎಂಪಿ ಪೌರ ಕಾರ್ಮಿಕರ ಮತ್ತು ಆರೋಗ್ಯ ಗ್ಯಾಂಗ್‌ಮನ್‌ಗಳ ಸಂಘ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.

‘2020ರ ಜೂನ್‌ 25ರಂದು ನಡೆದ ಸಮಿತಿ ಸಭೆಯಲ್ಲಿ 198 ವಾರ್ಡ್‌ಗಳಿಗೆ ಸಂಬಂಧಿಸಿದಂತೆ ಹೊಸದಾಗಿ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ. ಐದು ವಾರ್ಡ್‌ಗಳಿಗೆ ಟೆಂಡರ್ ನಿರ್ಬಂಧಿಸಲು ಸಹ ಸಮಿತಿ ತೀರ್ಮಾನಿಸಿದೆ. ಸಮಿತಿಯ ನಿರ್ಣಯದ ಹೊರತಾಗಿಯೂ ಕೆಲ ಬಿಡ್ಡುದಾರರಿಗೆ ಕಾರ್ಯಾದೇಶ ನೀಡಲಾಗಿದೆ. ಇದು ಕೆಟಿಪಿಪಿ ಕಾಯ್ದೆಯ ಉಲ್ಲಂಘನೆ. ವಾರ್ಡ್‌ಗಳ ಪುನರ್ ವಿಂಗಡಣೆಯಿಂದಾಗಿ ವಾರ್ಡ್‌ಗಳ ರಚನೆ ಮತ್ತು ಗಾತ್ರದಲ್ಲಿ ಗಣನೀಯ ಬದಲಾವಣೆ ಆಗಲಿದೆ. ಇದ್ಯಾವುದನ್ನೂ ಗಮನಿಸದೆ ಕಾರ್ಯಾದೇಶ ನೀಡಲಾಗುತ್ತಿದೆ’ ಎಂದು ಅರ್ಜಿದಾರರು ತಿಳಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಬಿಬಿಎಂಪಿಗೆ ನೋಟಿಸ್ ನೀಡಲು ಆದೇಶಿಸಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು