ಗುರುವಾರ , ಜುಲೈ 7, 2022
20 °C

ಹೊಸೂರಿನವರೆಗೂ ಮೆಟ್ರೊ ವಿಸ್ತರಿಸಲು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಮ್ಮ ಮೆಟ್ರೊ ಮಾರ್ಗವನ್ನು ಗಡಿಭಾಗದ ಹೊಸೂರಿನವರೆಗೂ ವಿಸ್ತರಿಸಲು ಕ್ರಮ ಕೈಗೊಳ್ಳುವಂತೆ ತೆಲುಗು ವಿಜ್ಞಾನ ಸಮಿತಿಯು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಮನವಿ ಮಾಡಿದೆ.

‘ಉಪರಾಷ್ಟ್ರಪತಿಯವರು ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಅವರನ್ನು ನಾವು ಭೇಟಿ ಮಾಡಿದ್ದೆವು. ಹೊಸೂರಿನವರೆಗೂ ಮೆಟ್ರೊ ಮಾರ್ಗ ವಿಸ್ತರಿಸುವುದರಿಂದ 30 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ಅನುಕೂಲವಾಗಲಿರುವ ವಿಷಯವನ್ನು ಅವರ ಗಮನಕ್ಕೆ ತಂದಿದ್ದೇವೆ. ಈ ಕುರಿತು ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸುವ ಭರವಸೆ ನೀಡಿದ್ದಾರೆ’ ಎಂದು ಸಮಿತಿಯ ಅಧ್ಯಕ್ಷ ಎ.ರಾಧಾಕೃಷ್ಣ ರಾಜು ತಿಳಿಸಿದ್ದಾರೆ.

‘ತಮಿಳುನಾಡು ಸರ್ಕಾರವು ದ್ವಿಭಾಷ ನೀತಿ ಜಾರಿಗೊಳಿಸಿದೆ. ಇದರ ಅನ್ವಯ ಅಲ್ಲಿನ ಶಾಲೆಗಳಲ್ಲಿ ತಮಿಳು ಮತ್ತು ಇಂಗ್ಲಿಷ್‌ ಮಾತ್ರ ಕಲಿಸಲಾಗುತ್ತದೆ. ಇದರಿಂದ ಕನ್ನಡ ಸೇರಿದಂತೆ ಇತರ ಭಾಷಿಕ ಮಕ್ಕಳಿಗೆ ತೊಂದರೆಯಾಗಲಿದೆ. ಈ ವಿಷಯವನ್ನೂ ಉಪರಾಷ್ಟ್ರಪತಿಯವರ ಗಮನಕ್ಕೆ ತಂದಿದ್ದೇವೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು