ಮಂಗಳವಾರ, ಆಗಸ್ಟ್ 3, 2021
28 °C

ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ‘ಶಾ.ಬಾಲೂರಾವ್‌ ಯುವ ಬರಹಗಾರ ಪ್ರಶಸ್ತಿ’ ಹಾಗೂ ‘ಶಾ.ಬಾಲೂರಾವ್ ಅನುವಾದ ಪ್ರಶಸ್ತಿ’ಗೆ ಲೇಖಕರಿಂದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.

ಪ್ರಶಸ್ತಿಗಳು ತಲಾ ₹25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿವೆ.

ಯುವ ಬರಹಗಾರ ಪ್ರಶಸ್ತಿಗೆ 35 ವರ್ಷದೊಳಗಿನವರು ರಚಿಸಿರುವ ಸಾಹಿತ್ಯದ ಯಾವುದೇ ಪ್ರಕಾರದ ಪುಸ್ತಕಗಳು ಹಾಗೂ ಅನುವಾದ ಪ್ರಶಸ್ತಿಗೆ ಬೇರೆ ಭಾಷೆಗಳಿಂದ ಕನ್ನಡಕ್ಕೆ ಅನುವಾದಗೊಂಡಿರುವ ಪುಸ್ತಕಗಳನ್ನು ಸಲ್ಲಿಸಬಹುದು.

ಆಸಕ್ತರು ಪುಸ್ತಕದ ಮೂರು ಪ್ರತಿಗಳು ಹಾಗೂ ಸ್ವವಿವರಗಳನ್ನು ಜುಲೈ 26ರೊಳಗೆ ಪ್ರತಿಷ್ಠಾನದ ವಿಳಾಸಕ್ಕೆ ತಲುಪಿಸುವಂತೆ ಪ್ರಕಟಣೆ ತಿಳಿಸಿದೆ.

ವಿಳಾಸ:ಗೌರವ ಕಾರ್ಯದರ್ಶಿ, ಬಿಎಂಶ್ರೀ ಪ್ರತಿಷ್ಠಾನ, ಎನ್‌.ಆರ್.ಕಾಲೊನಿ, ಬೆಂಗಳೂರು

ಸಂಪರ್ಕ:080–26615877

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು