ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎಸ್‌ಎಲ್‌ಸಿ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Published 8 ಜೂನ್ 2024, 23:58 IST
Last Updated 8 ಜೂನ್ 2024, 23:58 IST
ಅಕ್ಷರ ಗಾತ್ರ

ಬೆಂಗಳೂರು: ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿರುವ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ ಶಾಲಾ– ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿ ಶೇ 95ಕ್ಕಿಂತ ಹೆಚ್ಚು ಅಂಕಗಳಿಸಿದ ಮತ್ತು ಸರ್ಕಾರೇತರ ಶಾಲಾ– ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿ ಶೇ 98 ಅಂಕ ಗಳಿಸಿದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. 

ವಿದ್ಯಾರ್ಥಿಗಳು ಸ್ವ-ವಿವರ, ಶಾಲಾ–ಕಾಲೇಜಿನ ವಿವರ, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರಗಳೊಂದಿಗೆ ಅರ್ಜಿಯನ್ನು ಪ್ರತಿಭಾ ಪುರಸ್ಕಾರ ವಿಭಾಗ, ನಾಡಪ್ರಭು ಕೆಂಪೇಗೌಡ ಭವನ, ರಾಜ್ಯ ಒಕ್ಕಲಿಗರ ಸಂಘ, ಕೆ.ಆರ್. ರಸ್ತೆ, ವಿ.ವಿ.ಪುರ, ಬೆಂಗಳೂರು-4 ವಿಳಾಸಕ್ಕೆ ಜೂನ್ 15ರ ಒಳಗೆ ಸಲ್ಲಿಸಿ, ಸ್ವೀಕೃತಿ ಪಡೆದುಕೊಳ್ಳಬೇಕು.

ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಸಂಘದ ಕೇಂದ್ರ ಕಚೇರಿಯ ಪ್ರತಿಭಾ ಪುರಸ್ಕಾರ ವಿಭಾಗದಲ್ಲಿ ಪಡೆದುಕೊಳ್ಳಬಹುದು. ರಾಜ್ಯ ಒಕ್ಕಲಿಗರ ಸಂಘದ ವೆಬ್‌ಸೈಟ್‌ www.rvsangha.org ನಲ್ಲಿಯೂ ಪಡೆಯಬಹುದು ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ, ಪ್ರಧಾನ‌ ಕಾರ್ಯದರ್ಶಿ ಎಚ್.ಸಿ. ಜಯಮುತ್ತು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT