ಬೆಂಗಳೂರು: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು (ಕೆಎಸ್
ಸಿಎಸ್ಟಿ) 2020 ಮತ್ತು 2021ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳಿಗಾಗಿ ವಿಜ್ಞಾನಿಗಳು ಮತ್ತು ಎಂಜಿನಿಯರ್ಗಳಿಂದ ಅರ್ಜಿ ಆಹ್ವಾನಿಸಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಇಬ್ಬರು ಸಾಧಕರಿಗೆ ನೀಡುವ ‘ಸರ್.ಎಂ.ವಿಶ್ವೇಶ್ವರಯ್ಯ ಹಿರಿಯ ವಿಜ್ಞಾನಿ ಪ್ರಶಸ್ತಿ’ಯುತಲಾ ₹2 ಲಕ್ಷ ನಗದು, ನೆನಪಿನ ಕಾಣಿಕೆ ಒಳಗೊಂಡಿದೆ. ವಿಜ್ಞಾನಿ
ಗಳು ಮತ್ತು ಎಂಜಿನಿಯರ್ಗಳಿಗೆ ಈ ಪ್ರಶಸ್ತಿ ನೀಡಲಾಗುವುದು.

₹1.50 ಲಕ್ಷ ನಗದು ಒಳಗೊಂಡಿರುವ‘ರಾಜಾ ರಾಮಣ್ಣ ಪ್ರಶಸ್ತಿ’ಯನ್ನು ಇಬ್ಬರಿಗೆ ನೀಡಲಾಗುವುದು.

ಐದು ಮಂದಿ ವಿಜ್ಞಾನಿಗಳಿಗೆ ‘ಸರ್.ಸಿ.ವಿ.ರಾಮನ್ ವಿಜ್ಞಾನಿ ಪ್ರಶಸ್ತಿ’, ನಾಲ್ಕು ಎಂಜಿನಿಯರ್ಗಳಿಗೆ ‘ಸತೀಶ್ ಧವನ್ ಎಂಜಿನಿಯರ್ ಪ್ರಶಸ್ತಿ’, ಇಬ್ಬರು ಮಹಿಳಾ ಸಾಧಕರಿಗೆ ‘ಕಲ್ಪನಾ ಚಾವ್ಲಾ ಮಹಿಳಾ ವಿಜ್ಞಾನಿ ಅಥವಾ ಎಂಜಿನಿಯರ್ ಪ್ರಶಸ್ತಿ’ಗಳನ್ನು ನೀಡಲಾಗುವುದು. ಈ ಮೂರೂ ಪ್ರಶಸ್ತಿಗಳು ತಲಾ ₹1 ಲಕ್ಷ ನಗದು, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿಪತ್ರ ಒಳಗೊಂಡಿವೆ.

ಆಸಕ್ತರು ಪ್ರಶಸ್ತಿಗಳಿಗೆ ನಾಮಪತ್ರ ಸಲ್ಲಿಸಲು ಮೇ 17 ಕೊನೆಯ ದಿನ. ಹೆಚ್ಚಿನ ವಿವರಗಳಿಗೆ ಮಂಡಳಿಯ ವೆಬ್ಸೈಟ್ www.kscst.org.in ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.

ವಿಳಾಸ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಆವರಣ, ಬೆಂಗಳೂರು.

ಸಂಪರ್ಕ:080–23341652

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.