ಮಂಗಳವಾರ, ಜೂನ್ 2, 2020
27 °C
ಕಾರ್ಮಿಕರು ಓಡಾಡಿದರೆ ಬಿಲ್ಡರ್‌ಗಳ ವಿರುದ್ಧ ಮೊಕದ್ದಮೆ

ಕಾರ್ಮಿಕರಿಗೆ ಸವಲತ್ತು ಕಲ್ಪಿಸಲು ನೋಡಲ್‌ ಅಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಅಗತ್ಯ ಸೇವೆ ಕಲ್ಪಿಸುವ ಮೂಲಕ ಅವರು ಈಗಿರುವ ಸ್ಥಳ ಬಿಟ್ಟು ಬೇರೆಡೆ ತೆರಳದಂತೆ ನಿಗಾವಹಿಸಲು ನಿರ್ಮಾಣ ಚಟುವಟಿಕೆ ನಡೆಯುವ ಪ್ರತಿ ಜಾಗದಲ್ಲೂ ನೋಡಲ್ ಅಧಿಕಾರಿಗಳನ್ನು ನಿಯೋಜಿಸುವಂತೆ ಬಿಲ್ಡರ್‌ಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವರ ಆರ್‌.ಅಶೋಕ ತಿಳಿಸಿದರು.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಕೊರೋನಾ ವೈರೆಸ್ ಸೋಂಕು ಹಿನ್ನೆಲೆ ಕಟ್ಟಡ ಕಾರ್ಮಿಕರು ಗುಳೆ ಹೋಗುವುದನ್ನು ತಪ್ಪಿಸಬೇಕು. ಯಾವೊಬ್ಬ ಕಾರ್ಮಿಕರೂ ಹಸಿವಿನಿಂದ ಇರಬಾರದು. ಅವರಿಗೆ ಇರುವ ಸ್ಥಳದಲ್ಲೇ ವಸತಿ, ಊಟದ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ವೈದ್ಯಕೀಯ ಸೇವೆಯೂ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳ ವ್ಯವಸ್ಥೆ ಮಾಡಬೇಕು ಎಂದು ಕಾನ್ಫೆಡರೇಷನ್‌ ಆಫ್‌ ರಿಯಲ್‌ ಎಸ್ಟೇಟ್‌ ಡೆವಲಪರ್ಸ್‌ ಅಸೋಸಿಯೇಷನ್‌ (ಕ್ರೆಡೈ) ಹಾಗೂ ಬಿಲ್ಡರ್‌ಗಳ ಇತರ ಸಂಸ್ಥೆಗಳ ಜೊತೆ ನಡೆದ ಸಭೆಯಲ್ಲಿ ಸೂಚನೆ ನೀಡಿದ್ದೇವೆ’ ಎಂದರು.

‘ನಗರದಲ್ಲಿ ಹೊರರಾಜ್ಯ, ಹೊರಜಿಲ್ಲೆಗಳಿಂದ ಬಂದ ಸುಮಾರು 65 ಸಾವಿರ ಕಾರ್ಮಿಕರಿದ್ದಾರೆ. ಅವರಲ್ಲಿ 30 ಸಾವಿರಕ್ಕೂ ಮಂದಿ ಈಗಲೂ ನಗರದಲ್ಲಿದ್ದಾರೆ. ಅವರು ರಸ್ತೆಯಲ್ಲಿ ಓಡಾಡುವುದು ಕಂಡುಬಂದರೆ ಸಂಬಂಧಪಟ್ಟ ಬಿಲ್ಡರ್‌ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡು ಬಂಧಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು