ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟೆ ಲಕ್ಷ್ಮಿ ನರಸಿಂಹ ಸ್ವಾಮಿ ಧರ್ಮಸಂಸ್ಥೆಗೆ ಆಡಳಿತ ಮಂಡಳಿ ನೇಮಿಸಿ: ಸುದರ್ಶನ್

Last Updated 9 ಸೆಪ್ಟೆಂಬರ್ 2022, 19:14 IST
ಅಕ್ಷರ ಗಾತ್ರ

ಬೆಂಗಳೂರು: ಕೋಟೆ ಲಕ್ಷ್ಮಿ ನರಸಿಂಹ ಸ್ವಾಮಿ ಧರ್ಮಸಂಸ್ಥೆಗೆ (ಎಸ್‌ಎಲ್‌ಎನ್‌) ಹೊಸ ಆಡಳಿತ ಮಂಡಳಿಯನ್ನು ಸರ್ಕಾರ ಕೂಡಲೇ ನೇಮಿಸಬೇಕು ಎಂದು ಕಾಂಗ್ರೆಸ್ ಮುಖಂಡ ವಿ.ಆರ್.ಸುದರ್ಶನ್ ಒತ್ತಾಯಿಸಿದರು.

ಜನೋಪಕಾರಿ ದೊಡ್ಡಣ್ಣಶೆಟ್ಟಿ ಅವರು ಈ ಸಂಸ್ಥೆ ಸ್ಥಾಪಿಸಿದ್ದು, 1905ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅದಕ್ಕೆ ಚಾಲನೆ ನೀಡಿದ್ದರು. ಅಂದಿನಿಂದ ಬಡ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಂಸ್ಥೆ ಶ್ರಮಿಸುತ್ತಿದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ, ರವೀಂದ್ರನಾಥ ಟ್ಯಾಗೋರ್ ಕೂಡ ಇಲ್ಲಿ ಸಭೆ ನಡೆಸಿದ್ದರು. ಚಾರಿತ್ರಿಕ ಹಿನ್ನೆಲೆ ಹೊಂದಿರುವ ಈ ಸಂಸ್ಥೆಗೆ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಡಳಿತ ಮಂಡಳಿ ನೇಮಕ ಮಾಡಲಾಗುತ್ತಿದೆ. ಹಿಂದಿನ ಆಡಳಿತ ಮಂಡಳಿಯ ಅವಧಿ 2022ರ ಆಗಸ್ಟ್ 9ಕ್ಕೆ ಪೂರ್ಣಗೊಂಡಿದ್ದು, ಹೊಸ ಮಂಡಳಿ ನೇಮಕ ಆಗಬೇಕಿದೆ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಂಸ್ಥೆಯ ವ್ಯಾಪ್ತಿಯಲ್ಲಿ ಎಸ್‌ಎಲ್‌ಎನ್‌ ಪದವಿ ಕಾಲೇಜು, ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಗಳಿವೆ. ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿನಿಲಯದಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಪ್ರತಿ ದಿನದ ಊಟೋಪಚಾರ ಮತ್ತು ದೈನಂದಿನ ಖರ್ಚು ವೆಚ್ಚಗಳಿಗೆ ತೊಂದರೆಯಾಗಿದೆ. ಆದ್ದರಿಂದ ಕೂಡಲೇ ಆಡಳಿತ ಮಂಡಳಿ ನೇಮಕ ಮಾಡಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT