ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಘವೇಂದ್ರ ಬ್ಯಾಂಕ್‌ಗೆ ಸೂಕ್ತ ಆಡಳಿತಾಧಿಕಾರಿ ನೇಮಿಸಿ’

Last Updated 16 ಅಕ್ಟೋಬರ್ 2020, 20:28 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಂಕ್‌ ವ್ಯವಹಾರಗಳ ಬಗ್ಗೆ ತಿಳಿವಳಿಕೆ ಇರುವವರನ್ನೇ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ಗೆ ಆಡಳಿತಾಧಿಕಾರಿಯಾಗಿ ನೇಮಿಸುವಂತೆ ರಿಸರ್ವ್ ಬ್ಯಾಂಕ್ ನೀಡಿರುವ ಸಲಹೆಯನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಬ್ಯಾಂಕ್‌ ಹಗರಣದ ಬಗ್ಗೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ರಾಜ್ಯ ಸರ್ಕಾರಕ್ಕೆ ಸಲಹೆ ನೀಡುವ ಅಧಿಕಾರ ಆರ್‌ಬಿಐಗೆ ಇದೆ. ಆಡಳಿತಾಧಿಕಾರಿಗೆ ಬ್ಯಾಂಕ್‌ ವಹಿವಾಟಿನ ಬಗ್ಗೆ ಜ್ಞಾನ ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು’ ಎಂದು ಹೇಳಿತು.

ಠೇವಣಿ ವಾಪಸ್ ಪಡೆಯಲು ಇರುವ ₹1 ಲಕ್ಷ ಮಿತಿಯನ್ನು ಹೆಚ್ಚಿಸಬೇಕು ಎಂಬ ಹೂಡಿಕೆದಾರರ ಬೇಡಿಕೆ ಪರಿಗಣಿಸುವಂತೆ ಆರ್‌ಬಿಐಗೆ ನಿರ್ದೇಶನ ನೀಡಿತು.

ಸಾಲ ವಸೂಲಿ ಮಾಡದ ಕಾರಣ ‌₹1,400 ಕೋಟಿ ಬಾಕಿ ಉಳಿದಿದೆ ಎಂದು ಮೌಖಿಕವಾಗಿ ತಿಳಿಸಿದ ಆರ್‌ಬಿಐ ಪರ ವಕೀಲರು, ಹೀಗಾಗಿ ಸೂಕ್ತ ವ್ಯಕ್ತಿಯನ್ನು ಆಡಳಿತಾಧಿಕಾರಿಯಾಗಿ ನೇಮಿಸಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT