ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರಸ್ಟ್‌ಗಳಿಗೆ ನೇಮಕ ಆದೇಶ ವಾಪಸ್‌!

ಮತ್ತೊಮ್ಮೆ ಟೀಕೆಗೆ ಒಳಗಾದ ಸರ್ಕಾರದ ನಿಲುವು
Last Updated 25 ಆಗಸ್ಟ್ 2022, 21:28 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಟ್ರಸ್ಟ್‌, ಪ್ರತಿಷ್ಠಾನಗಳಿಗೆ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಯಲ್ಲಿ ಆಗಿರುವ ಎಡವಟ್ಟುಗಳಿಗೆ ಸಾಹಿತ್ಯಿಕ ವಲಯ, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆ, ಇಡೀ ನೇಮಕಾತಿ ಆದೇಶವನ್ನು ರಾಜ್ಯ ಸರ್ಕಾರ ಗುರುವಾರ ಹಿಂಪಡೆದಿದೆ.

ಆ ಮೂಲಕ, ನೇಮಕಾತಿಗಳು, ನೀತಿ– ನಿಲುವುಗಳ‌ ವಿಚಾರದಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ತೀರ್ಮಾನ ಮತ್ತೊಮ್ಮೆ ಟೀಕೆಗೆ ಗುರಿಯಾಗಿದೆ.

21 ಟ್ರಸ್ಟ್‌, ಪ್ರತಿಷ್ಠಾನಗಳಿಗೆ ಹೊಸದಾಗಿ ಕಾರ್ಯಕಾರಿ ಸಮಿತಿ ರಚಿಸಿ ಇಲಾಖೆ ಬುಧವಾರ ಆದೇಶ ಹೊರಡಿಸಿತ್ತು. ಕಳೆದ ವರ್ಷ ನಿಧನರಾಗಿರುವ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಅವರನ್ನು ಚಿಕ್ಕಮಗಳೂರಿನ ‘ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ’ದ ಸದಸ್ಯರನ್ನಾಗಿ ನೇಮಿಸಲಾಗಿತ್ತು. ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT