ಮಂಗಳವಾರ, ನವೆಂಬರ್ 24, 2020
26 °C

ನಾಲ್ಕು ಕ್ಲಸ್ಟರ್ ವಿವಿಗೆ ಕುಲಪತಿಗಳ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಸರ್ಕಾರ ಹೊಸತಾಗಿ ರಚಿಸಿರುವ ನಾಲ್ಕು ಕ್ಲಸ್ಟರ್ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ.

ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯಕ್ಕೆ ಬೆಂಗಳೂರು ವಿಶ್ವವಿದ್ಯಾಲಯದ ರಸಾಯನ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಪ್ರೊ.ಎಲ್. ಗೋಮತಿ ದೇವಿ, ರಾಯಚೂರು ಕ್ಲಸ್ಟರ್ ವಿಶ್ವವಿದ್ಯಾಲಯಕ್ಕೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಹರೀಶ್ ರಾಮಸ್ವಾಮಿ, ಬೆಂಗಳೂರು ನೃಪತುಂಗ ಕ್ಲಸ್ಟರ್ ವಿಶ್ವ ವಿದ್ಯಾಲಯಕ್ಕೆ ಬಾಗಲಕೋಟೆ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ.ಶ್ರೀನಿವಾಸ್ ಎಸ್. ಬಾಲಿ, ಮಂಡ್ಯ ಕ್ಲಸ್ಟರ್ ವಿಶ್ವ ವಿದ್ಯಾಲಯಕ್ಕೆ ಎಸ್‌ಜೆಬಿ ತಾಂತ್ರಿಕ ಸಂಸ್ಥೆಯ ಪ್ರಾಂಶುಪಾಲ ಡಾ.ಪುಟ್ಟರಾಜು ಅವರನ್ನು ಕುಲಪತಿ ಹುದ್ದೆಗೆ ನೇಮಕ ಮಾಡಿ ಉನ್ನತ ಶಿಕ್ಷಣ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.

ಈ ಹಿಂದೆ ಕೆಲವು ಕ್ಲಸ್ಟರ್ ವಿಶ್ವವಿದ್ಯಾಲಯಗಳಿಗೆ ಆಡಳಿತಾತ್ಮಕ ದೃಷ್ಟಿಯಿಂದ ವಿಶೇಷಾಧಿಕಾರಿಗಳನ್ನು ನೇಮಕ ಮಾಡಲಾಗುತಿತ್ತು. ಇದೇ ಮೊದಲ ಬಾರಿಗೆ ಕುಲಪತಿ ಆಯ್ಕೆ ಮಾಡಲಾಗಿದೆ. ಕ್ಲಸ್ಟರ್ ವಿಶ್ವವಿದ್ಯಾಲಯಗಳ ಕುಲಪತಿಗಳ ಅಧಿಕಾರವಧಿ 4 ವರ್ಷ ಅಥವಾ 67 ವರ್ಷ ವಯೋಮಿತಿ ಯಾವುದು ಮೊದಲೊ ಅಲ್ಲಿಯವರೆಗೂ ಮುಂದುವರೆಯಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.