ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ವಜಾ

Published 7 ಫೆಬ್ರುವರಿ 2024, 18:30 IST
Last Updated 7 ಫೆಬ್ರುವರಿ 2024, 18:30 IST
ಅಕ್ಷರ ಗಾತ್ರ

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ಡಾ.ವಿ. ಲೋಕೇಶ್‌ ಅವರನ್ನು ವಜಾ ಮಾಡಿದ್ದು, ಡಾ. ಸೈಯದ್ ಅಲ್ತಾಫ್ ಅವರನ್ನು ನೂತನ ನಿರ್ದೇಶಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಡಾ. ವಿ. ಲೋಕೇಶ್ ಅವರ ವಿರುದ್ಧ ಅಧಿಕಾರ ದುರ್ಬಳಕೆ, ಅಕ್ರಮ ಸೇವಾ ಬಡ್ತಿ, ವೈದ್ಯಕೀಯ ನಿರ್ಲಕ್ಷ್ಯ ಸೇರಿ ವಿವಿಧ ಆರೋಪಗಳ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದ್ದವು. ಪೆಟ್‌ಸ್ಕ್ಯಾನ್‌ ದರ ನಿಗದಿಗೆ ಸಂಬಂಧಿಸಿದಂತೆ ಹೊರಡಿಸಿದ್ದ ಕಾರ್ಯಾದೇಶ ರದ್ದುಪಡಿಸಿ, ಹೊಸ ಕಾರ್ಯಾದೇಶ ಹೊರಡಿಸಿದ್ದೂ ಸೇರಿದಂತೆ ಹಲವು ಆರೋಪಗಳು ಅವರ ಮೇಲೆ ಇದ್ದವು.

ಈ ಬಗ್ಗೆ ಐಎಎಸ್ ಅಧಿಕಾರಿ ಅರುಂಧತಿ ಚಂದ್ರಶೇಖರ್ ಅಧ್ಯಕ್ಷತೆಯ ಸಮಿತಿಯು ತನಿಖೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಈ ವರದಿಯ ಆಧಾರದಲ್ಲಿ ನಿರ್ದೇಶಕ ಹುದ್ದೆಯಿಂದ  ಡಾ.ವಿ. ಲೋಕೇಶ್‌ ಅವರನ್ನು ಸರ್ಕಾರ ವಜಾಗೊಳಿಸಿತ್ತು.

ಕಿದ್ವಾಯಿಯ ಸರ್ಜಿಕಲ್ ಆಂಕಾಲಜಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ. ಸೈಯದ್ ಅಲ್ತಾಫ್ ಅವರನ್ನು ಇದೀಗ ನಿರ್ದೇಶಕ ಸ್ಥಾನಕ್ಕೆ ನೇಮಕ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT