ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರಮದಾನ: ಶುಚಿಯಾಯಿತು ರಸ್ತೆ, ಪಾದಚಾರಿ ಮಾರ್ಗ

ಅಪಾರ್ಟ್‌ಮೆಂಟ್‌ ಅಸೋಸಿಯೇಷನ್ ಸದಸ್ಯರಿಂದ ಸಾಮಾಜಿಕ ಕಳಕಳಿ
ಶಿವರಾಜ್ ಮೌರ್ಯ
Published 9 ಫೆಬ್ರುವರಿ 2024, 18:14 IST
Last Updated 9 ಫೆಬ್ರುವರಿ 2024, 18:14 IST
ಅಕ್ಷರ ಗಾತ್ರ

ಕೆ.ಆರ್.ಪುರ: ವೈಟ್‌ಫೀಲ್ಡ್‌ನ ಬ್ರಿಗೇಡ್ ವುಡ್ಸ್ ಅಪಾರ್ಟ್‌ಮೆಂಟ್‌ ಅಸೋಸಿಯೇಷನ್ ಸದಸ್ಯರು ಮತ್ತು ಸಾರ್ವಜನಿಕರರು ಸ್ವಯಂ ಪ್ರೇರಿತವಾಗಿ ರಸ್ತೆ, ಪಾದಚಾರಿ ಮಾರ್ಗದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡು ಮಾದರಿಯಾಗಿದ್ದಾರೆ.

ನೂರಕ್ಕೂ ಹೆಚ್ಚು ಮಂದಿ ಕೈಗೊಂಡ ಈ ಅಭಿಯಾನದಲ್ಲಿ ಚರಂಡಿಯನ್ನೂ ಸ್ವಚ್ಛಗೊಳಿಸಿದ್ದಾರೆ. ಪರಿಣಾಮವಾಗಿ ಈ ಭಾಗದಲ್ಲಿ ಗಬ್ಬೆದ್ದಿದ್ದ ವಾತಾವರಣ ಬದಲಾಗಿದೆ.

ವೈಟ್‌ಫೀಲ್ಡ್‌‌ನ ಜಿ.ಆರ್.ಪಾರ್ಕ್ ಮುಖ್ಯರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಾಗಿ ಐ.ಟಿ–ಬಿ.ಟಿ ಕಂಪನಿಗಳಿವೆ. ಈ ಭಾಗದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯಲಾಗುತ್ತಿದೆ. ಅಪಾರ್ಟ್‌ಮೆಂಟ್‌ ಅಸೋಸಿಯೇಷನ್ ಸದಸ್ಯರು, ಸಾರ್ವಜನಿಕರೊಂದಿಗೆ ಸೇರಿ ಸ್ವಚ್ಛತಾ ಅಭಿಯಾನ ಕೈಗೊಂಡು ಪಾದಚಾರಿ ಮಾರ್ಗವನ್ನು ನಳನಳಿಸುವಂತೆ ಮಾಡಿದ್ದಾರೆ.

ಅಪಾರ್ಟ್‌ಮೆಂಟ್‌ ನಿವಾಸಿಗಳು ಬಿಡುವಿನ ಸಮಯದಲ್ಲಿ ಆಗಾಗ್ಗೆ ಸ್ವಚ್ಛತಾ ಕಾರ್ಯ ಕೈಗೊಳ್ಳುತ್ತಾರೆ. ಆರು ತಿಂಗಳ ಹಿಂದೆ ಇದೇ ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದರು. ಈಗ ಮತ್ತೊಮ್ಮೆ ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ, ತಂಡದೊಂದಿಗೆ ಪಾದಚಾರಿ ಮಾರ್ಗ, ಮಲಿನಗೊಂಡ ಚರಂಡಿ, ರಸ್ತೆ ಬದಿಯಲ್ಲಿ ಗಿಡ ನೆಟ್ಟು ಪರಿಸರದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯ ನಡೆಸಿದರು.

ಜಿ.ಆರ್.ಟೆಕ್ ಪಾರ್ಕ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಸ್ತೆ ಉದ್ದಕ್ಕೂ ಗುಟ್ಕಾ– ಪಾನ್ ಮಸಾಲಾ ಅಂಗಡಿ, ಎಳನೀರು ಅಂಗಡಿ, ಸಿಗರೇಟ್ ಮಾರಾಟ ಅಂಗಡಿಗಳೇ ಆವರಿಸಿವೆ. ಪಾದಚಾರಿ ಮಾರ್ಗ ಹಾಗೂ ತೆರೆದ ಚರಂಡಿಯಲ್ಲಿ ತಂಬಾಕು ಉತ್ಪನ್ನಗಳು, ಪಾನ್ ಮಸಾಲಾ ಚೀಟಿಗಳು, ಟೀ ಕಪ್, ಮದ್ಯದ ಬಾಟಲಿಗಳು, ಆಹಾರದ ತಟ್ಟೆಗಳು ತ್ಯಾಜ್ಯ ಅವಶೇಷಗಳನ್ನು ಎಲ್ಲೆಂದರಲ್ಲಿ ಎಸೆಯಲಾಗುತ್ತಿತ್ತು. ಈ ರಸ್ತೆ ಮಲಿನಗೊಂಡು ರಸ್ತೆಯಲ್ಲಿ ಓಡಾಡದ ಸ್ಥಿತಿ ನಿರ್ಮಾಣವಾಗಿತ್ತು. ಅಪಾರ್ಟ್‌ಮೆಂಟ್‌ ನಿವಾಸಿಗಳು, ಸಾರ್ವಜನಿಕರು ಹಾಗೂ ಬಿಬಿಎಂಪಿ ಸಿಬ್ಬಂದಿಯೊಂದಿಗೆ ಸ್ವಚ್ಛಗೊಳಿಸುವ ಕಾರ್ಯ ನಡೆಸಲಾಯಿತು ಎಂದು ಅಸೋಸಿಯೇಷನ್‌ ಸದಸ್ಯರು ಹೇಳಿದರು.

ಅಪಾರ್ಟ್‌ಮೆಂಟ್‌ ನಿವಾಸಿಗಳು ಸ್ವಚ್ಛತಾ ಕಾರ್ಯ ನಡೆಸಿದರು
ಅಪಾರ್ಟ್‌ಮೆಂಟ್‌ ನಿವಾಸಿಗಳು ಸ್ವಚ್ಛತಾ ಕಾರ್ಯ ನಡೆಸಿದರು
ಅಪಾರ್ಟ್‌ಮೆಂಟ್‌ ನಿವಾಸಿಗಳು ಸ್ವಚ್ಛತಾ ಕಾರ್ಯ ನಡೆಸಿದರು
ಅಪಾರ್ಟ್‌ಮೆಂಟ್‌ ನಿವಾಸಿಗಳು ಸ್ವಚ್ಛತಾ ಕಾರ್ಯ ನಡೆಸಿದರು

ಸ್ವಚ್ಛಗೊಳಿಸಿದ ಸ್ಥಳದಲ್ಲಿ ಕಸದ ಬುಟ್ಟಿಗಳನ್ನು ಇಡುವ ಕುರಿತು ಮಹದೇವಪುರ ಜಂಟಿ ಆಯುಕ್ತರೊಂದಿಗೆ ಚರ್ಚಿಸುತ್ತೇನೆ.

ಉಜ್ವಲ್ ಬಿಬಿಎಂಪಿ ಆರೋಗ್ಯ ನಿರೀಕ್ಷಕ

ಬಿಡುವಿನ ವೇಳೆಯಲ್ಲಿ ಸ್ವಚ್ಛತಾ ಅಭಿಯಾನ

ಈ ರಸ್ತೆಯಲ್ಲಿ ನಿತ್ಯ ಸಾವಿರಾರು ಜನರು ಓಡಾಡುತ್ತಾರೆ. ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಹಾಗಾಗಿ ಅಪಾರ್ಟ್‌ಮೆಂಟ್‌ ನಿವಾಸಿಗಳೊಂದಿಗೆ ನೂರಕ್ಕೂ ಹೆಚ್ಚು ಜನರು ಸ್ವಯಂಪ್ರೇರಿತರಾಗಿ ಸ್ವಚ್ಛತಾ ಅಭಿಯಾನ ನಡೆಸಿದವು. ಬಿಬಿಎಂಪಿ ಹಾಗೂ ಸಾರ್ವಜನಿಕರ ಸಹಕಾರದಿಂದ ರಸ್ತೆಯ ಉದ್ದಕ್ಕೂ ಸ್ವಚ್ಛಗೊಳಿಸಿದ್ದೇವೆ. ಮುಂದಿನ ದಿನಗಳಲ್ಲಿ ಕೂಡ ಬಿಡುವಿನ ವೇಳೆಯಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಗುವುದು. ಅಪಾರ್ಟ್‌ಮೆಂಟ್‌ ನಿವಾಸಿಗಳು ಸ್ವಚ್ಛಗೊಳಿಸಿದ ಜಾಗದಲ್ಲಿ ಕಸದ ಬುಟ್ಟಿಗಳನ್ನು ಇಡಬೇಕೆಂದು ಬಿಬಿಎಂಪಿ ಆರೋಗ್ಯ ನಿರೀಕ್ಷಿಕರಿಗೆ ಎಂದು ಮನವಿ ಮಾಡಿದ್ದೇವೆ.ರಮಾಕಾಂತ್ ಗ್ರೀನ್‌ವುಡ್ ಅಪಾರ್ಟ್‌ಮೆಂಟ್‌ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT