ಶನಿವಾರ, ಫೆಬ್ರವರಿ 4, 2023
17 °C

ಪಕ್ಷ ಸಂಘಟನೆಗೆ ಕಾರ್ಯಕರ್ತರ ಪಾತ್ರ ಮಹತ್ವ: ಅರವಿಂದ ಲಿಂಬಾವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪುರ: ‘ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಬಲಪಡಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದು. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಬೇಕು’ ಎಂದು ಅರಣ್ಯ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

ಹೂಡಿಯಲ್ಲಿ ಆಯೋಜಿಸಿದ್ದ ಮಹದೇವಪುರ ಕ್ಷೇತ್ರ ಗ್ರಾಮಾಂತರ ಮಂಡಲದ ಕಾರ್ಯಕಾರಣಿ ಸಭೆಯಲ್ಲಿ ಅವರು ಮಾತನಾಡಿದರು.

‘ಕ್ಷೇತ್ರದಲ್ಲಿ ಪಕ್ಷದ ನಿರಂತರ ಚಟುವಟಿಕೆಗಳಿಂದ ಸಂಘಟನೆ ಪೂರಕವಾಗಿದೆ. ಯಾವುದೇ ಅಪೇಕ್ಷೆಯಿಲ್ಲದೆ ಪಕ್ಷ ಸಂಘಟನೆಗೆ ಕಾರ್ಯಕರ್ತರು ಒತ್ತು ನೀಡಬೇಕು. ಕ್ಷೇತ್ರದಲ್ಲಿ ಶೇ 95ರಷ್ಟು ಮತದಾರರಿಗೆ ಲಸಿಕೆ ಅಭಿಯಾನದ ಮೂಲಕ ಕೋವಿಡ್‌ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಬೇಕು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು