ಬೆಂಗಳೂರು: ದೊಡ್ಡ ನಾಗಮಂಗಲ ಸಮೀಪದ ಬಡಾವಣೆಯೊಂದರಲ್ಲಿ 35 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಅಡಿ ನಾಲ್ವರನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ರಘು ಅಲಿಯಾಸ್ ಅಪ್ಪು (24), ಕೆಂಚೇಗೌಡ (26), ಮಾದೇಶ್ (27) ಹಾಗೂ ಶಶಿಕುಮಾರ್ (24) ಬಂಧಿತರು.

ತಮ್ಮ ಸ್ನೇಹಿತನ ಮನೆಗೆ ಸಂತ್ರಸ್ತೆ ಹೋಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ಆರೋಪಿಗಳು, ಪೊಲೀಸರಿಗೆ ದೂರು ನೀಡುವುದಾಗಿ ಹೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಲಾಗಿದೆ.

‘ಅತ್ಯಾಚಾರ ಎಸಗಿದ ಬಳಿಕ ಆರೋಪಿಗಳು ಹಣ ನೀಡುವಂತೆ ಬೆದರಿಸಿದ್ದರು. ಆಗ, ಸಂತ್ರಸ್ತೆ ತನ್ನ ಸ್ನೇಹಿತೆಯ ಅಕೌಂಟ್ನಿಂದ ₹12 ಸಾವಿರ ಹಾಗೂ ತನ್ನ ಖಾತೆಯಿಂದ ₹ 8 ಸಾವಿರ ಹಾಕಿದ್ದರು. ಆ ಹಣವನ್ನು ಆರೋಪಿಗಳು ಬೆಟ್ಟಿಂಗ್ ಆ್ಯಪ್ ಖಾತೆಗೆ ಹಾಕಿಸಿಕೊಂಡಿದ್ದರು. ನಂತರ, ಮೊಬೈಲ್, ವಾಷಿಂಗ್ ಮಷಿನ್, ಟಿ.ವಿ ಹಾಗೂ ಫ್ರಿಜ್ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ದೂರು ನೀಡಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಕೃತ್ಯ ಎಸಗಿದ ಬಳಿಕ ಆರೋಪಿಗಳು ಪೊಲೀಸರಿಗೆ ಮಾಹಿತಿ ನೀಡದಂತೆ ಬೆದರಿಕೆ ಹಾಕಿದ್ದರು’ ಎಂದು ಮೂಲಗಳು ತಿಳಿಸಿವೆ.

‘ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಆಧರಿಸಿ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.