ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಮಾರಕಾಸ್ತ್ರಗಳನ್ನು ಹಿಡಿದು ಬೆದರಿಕೆ ಹಾಕಿದ್ದ ಆರೋಪಿ ಬಂಧನ

Published 15 ಜನವರಿ 2024, 15:12 IST
Last Updated 15 ಜನವರಿ 2024, 15:12 IST
ಅಕ್ಷರ ಗಾತ್ರ

ಬೆಂಗಳೂರು: ಮಾರಕಾಸ್ತ್ರಗಳನ್ನು ಹಿಡಿದು ಪಕ್ಕದ ಮನೆಯವರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಪಣತ್ತೂರು ದಿಣ್ಣೆ ನಿವಾಸಿಯಾದ ಮುತ್ತು ಮುರಳಿ ಅಲಿಯಾಸ ಮುರಳಿ ಸಂಪಗಿ (27) ಬಂಧಿತ ಆರೋಪಿ. ‌

ಮುರಳಿ ಸಂಪಂಗಿ, ನೀರಿನ ಟ್ಯಾಂಕರ್‌ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಭಾನುವಾರ ಸಂಜೆ ಆರೋಪಿಯ ತಂದೆಯೊಂದಿಗೆ ಕ್ಷುಲ್ಲಕ ಕಾರಣಕ್ಕಾಗಿ ಪಕ್ಕದ ಮನೆಯ ನಿವಾಸಿ ರಾಜಪ್ಪ ಜಗಳ ತೆಗೆದಿದ್ದರು. ಎರಡು ಕುಟುಂಬಗಳ ನಡುವೆ ಗಲಾಟೆಯಾಗಿದೆ. ಆರೋಪಿ ಮಾರಕಾಸ್ತ್ರ ಹಿಡಿದು ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದ’ ಎಂದು ಪೋಲಿಸರು ಹೇಳಿದರು.

‘ಈ ಬಗ್ಗೆ ರಾಜಪ್ಪ ವರ್ತೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು  ಬಂಧಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT