ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಕರ್ನಾಟಕ: ಇದುವರೆಗೆ 32 ಸಾವಿರ ಫಲಾನುಭವಿಗಳು

Last Updated 22 ಸೆಪ್ಟೆಂಬರ್ 2018, 19:48 IST
ಅಕ್ಷರ ಗಾತ್ರ

ಬೆಂಗಳೂರು: ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಇದುವರೆಗೂ 32,870 ಫಲಾನುಭವಿಗಳು ಚಿಕಿತ್ಸೆ ಪಡೆದಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಮಾರ್ಚ್‌ 2ರಿಂದ ಈ ಯೋಜನೆ ಆರಂಭಗೊಂಡಿದ್ದು, ಆರು ತಿಂಗಳ ಅವಧಿಯಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳೆರಡರಲ್ಲೂ ಸೌಲಭ್ಯ ದೊರೆಯುತ್ತಿದೆ.

ಈ ಯೋಜನೆಯಲ್ಲಿ ಬಿಪಿಎಲ್‌ ಕುಟುಂಬಗಳಿಗೆ ಉಚಿತ ಹಾಗೂ ಎಪಿಎಲ್‌ ಕುಟುಂಬಗಳಿಗೆ ಪಾವತಿ ಆಧಾರದಲ್ಲಿ ಚಿಕಿತ್ಸೆ ನೀಡಲಾಗಿದೆ. 6.5 ಕೋಟಿ ಜನರಿಗೆ ಚಿಕಿತ್ಸೆ ನೀಡುವ ಉದ್ದೇಶವನ್ನು ಯೋಜನೆ ಹೊಂದಿದೆ. 1516 ಚಿಕಿತ್ಸಾ ವಿಧಾನಗಳು ಇದರ ವ್ಯಾಪ್ತಿಗೆ ಒಳಪಟ್ಟಿವೆ.

ಈ ಯೋಜನೆಯಡಿ ಹೃದ್ರೋಗ ಚಿಕಿತ್ಸೆಗೆ ಒಳಗಾದವರೇ ಹೆಚ್ಚು. 519 ಖಾಸಗಿ, 381 ಸರ್ಕಾರಿ ಆಸ್ಪತ್ರೆಗಳು ಸೇರಿ ಒಟ್ಟು 900 ಆಸ್ಪತ್ರೆಗಳು ನೋಂದಣಿ ವ್ಯಾಪ್ತಿಗೆ ಒಳಪಟ್ಟಿವೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT